ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಈ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ. ಗಳನ್ನು ಪ್ರತಿ ತಿಂಗಳು ನಿರುದ್ಯೋಗಿ ಭತ್ಯೆಯಾಗಿ ನೀಡಲಾಗುವುದು. ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ನೊಂದಣಿಗೆ ಅಗತ್ಯವಿರುವ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.ಅರ್ಹ ಅಭ್ಯರ್ಥಿಯು ಪ್ರತಿ ಮಾಹೆ 25 ರ ಒಳಗಾಗಿ ತಾನು ನಿರುದ್ಯೋಗಿ ಎಂದು ಕಡ್ಡಾಯವಾಗಿ ಸ್ವಯಂ ಘೋಷಣೆ ನೀಡಬೇಕು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ