ಸುರತ್ಕಲ್: ಮಕ್ಕಳು ಪಠ್ಯವನ್ನು ಅಭ್ಯಾಸ ಮಾಡುವುದರ ಜೊತೆಗೆ ಹೊರ ಜಗತ್ತಿನಲ್ಲಿ ನಡೆಯುವ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮನೋಭಾವವನ್ನು ಬೆಳೆಸಿಕೊಂಡು ಆತ್ಮವಿಶ್ವಾಸ ದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರುವುದೇ ವಾರ್ಷಿಕೋತ್ಸವದ ಉದ್ದೇಶ ಎಂದು ಸುರತ್ಕಲ್ ಎನ್‌ಐಟಿಕೆ ಯ ಅಲುಮ್ನಿ ಮತ್ತು ಕಾರ್ಪೊರೇಟ್ ರಿಲೇಷನ್ಸ್ ನ ಡೀನ್ ಆದ ಪ್ರೊಫೆಸರ್ ಶ್ರೀಕಾಂತ್ ಎಸ್ ರಾವ್ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಇವರು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಅನುದಾನಿತ ವಿದ್ಯಾದಾಯಿನೀ ಪ್ರೌಢಶಾಲೆಯ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಬಹುಮಾನ ವಿತರಣೆ ನೆರವೇರಿಸಿ ಮಾತನಾಡಿದರು.
ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಲೆಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಮೆಚ್ಚುಗೆ ಸೂಚಿಸಿ ವಿದ್ಯಾರ್ಥಿಗಳಿಗೆೆ ಶುಭಹಾರೈಸಿದರು.
ಶಾಲಾ 1984 ನೇ ಸಾಲಿನ ಹಳೆ ವಿದ್ಯಾರ್ಥಿ ಪ್ರಸ್ತುತ ರಾಮಾಶ್ರಮ ಆಂಗ್ಲ ಮಾಧ್ಯಮ ಶಾಲೆ ಕೊಂಚಾಡಿ ಇಲ್ಲಿನ ಸಹ ಶಿಕ್ಷಕಿ ಶ್ರೀಮತಿ ಪುಷ್ಪಲತಾ ಕೆ. ಇವರು ತನ್ನ ಈ ಮಾತೃ ಸಂಸ್ಥೆಯ ಶಾಲಾ ನೆನಪುಗಳನ್ನು ತಿಳಿಸುತ್ತಾ ಶಾಲಾ ವಿದ್ಯಾರ್ಥಿಗಳ ಕಲಾ ಕೌಶಲ್ಯತೆಗೆ ಮೆಚ್ಚುಗೆಯನ್ನು ಸೂಚಿಸಿದರು. ಸುಂದರ ಸಂಸ್ಕೃತಿಯನ್ನು ಬೆಳೆಸುತ್ತಾ ಶ್ರೇಷ್ಠ್ರ ನಾಗರಿಕರಾಗಲು ಕರೆಯಿತ್ತು, ಇತಿಹಾಸವುಳ್ಳ ಶಾಲೆಯ ವೈಭವವನ್ನು ಪ್ರಶಂಶಿಸಿ ಸ್ವಸ್ತಿ ವಾಚನಗೈದರು.
ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕ ಸುಧಾಕರ್ ರಾವ್ ಪೇಜಾವರ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ. ಶಾಲಾ ವಾರ್ಷಿಕ ವರದಿಯನ್ನು ವಾಚಿಸಿದರು. ಶಾಲಾ ಸಹಶಿಕ್ಷಕ ದಿವಸ್ಪತಿ ಕಾರ್ಯಕ್ರಮವನ್ನು ನಿರೂಪಿಸಿ, ಶಾಲಾ ವಿದ್ಯಾರ್ಥಿ ನಾಯಕ ಶ್ರೀಕೃಷ್ಣ ವಂದಿಸಿದರು.
ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ಬಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಸೌಮ್ಯ ಕ್ರಮವಾಗಿ ಪಾಠ, ವಿದ್ಯಾರ್ಥಿವೇತನ ಬಹುಮಾನ ಮತ್ತು ಕ್ರೀಡಾ ಬಹುಮಾನ ಪಟ್ಟಿಯನ್ನು ವಾಚಿಸಿದರು. ಸಮಾರಂಭದಲ್ಲಿ ಸಂಘದ ಪದಾಧಿಕಾರಿಗಳು, ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರು, ಸಂಘದ ಎಲ್ಲಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು, ಶಾಲಾ ವಿದ್ಯಾರ್ಥಿಗಳೊಂದಿಗೆ ಪೋಷಕರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಅಂತಿಮವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ