ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

Upayuktha
0


ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.


ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2025 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.


ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ (ಸಂಪರ್ಕ ಸಂಖ್ಯೆ: 080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in ನಲ್ಲಿ ಕೂಡ ಶೇ.50 ರ ರಿಯಾಯಿತಿ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. 



    ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top