ಲೋಕಮಾನ್ಯ ಮ್ಯಾರಥಾನ್ ನಲ್ಲಿ ನಿಟ್ಟೆ ವಿದ್ಯಾರ್ಥಿಗಳ ಸಾಧನೆ

Upayuktha
0

  



ನಿಟ್ಟೆ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ಲೋಕಮಾನ್ಯ ಮ್ಯಾರಥಾನ್ ಕಾರ್ಯಕ್ರಮವನ್ನು ಭಾರತದ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಉದ್ಘಾಟಿಸಿದರು. ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ನಿಟ್ಟೆಯ ವಿದ್ಯಾರ್ಥಿಗಳ ಸಾಧನೆ ಈ ಕೆಳಗಿನಂತಿದೆ.


ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕನ್ನಡ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ದೀಕ್ಷಿತಾ ಗಣಪತಿ ನಾಯ್ಕ್ 17 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ 3ನೇ ವರ್ಷದ B.Com ವಿದ್ಯಾರ್ಥಿನಿ ಪ್ರತೀಕ್ಷಾ ಆಚಾರ್ಯ 5 ಕಿ.ಮೀ ಮುಕ್ತ ವಿಭಾಗದಲ್ಲಿ ಬೆಳ್ಳಿ ಪದಕ ಗಳಿಸಿದ್ದಾರೆ. 


ನಿಟ್ಟೆಯ ಡಾ.ಎನ್.ಎಸ್.ಎ.ಎಂ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಕ್ಷಿತ್ ಆರ್.ಬಂಗೇರ 17 ವರ್ಷದೊಳಗಿನ ಬಾಲಕರ 5 ಕಿ.ಮೀ ಓಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.


ನಿಟ್ಟೆಯ ಡಾ.ಎನ್.ಎಸ್.ಎ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ದೀಪಿಕಾ 14 ವರ್ಷದೊಳಗಿನ ಬಾಲಕಿಯರ 3 ಕಿ.ಮೀ ಓಟದಲ್ಲಿ 4ನೇ ಸ್ಥಾನ ಪಡೆದಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top