ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ 'ಅಮ್ಮ ಹೇಳಿದ ಕತೆಗಳು' ಕಥಾಸಂಕಲನವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 29ರಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೃತಿಕರ್ತ ಡಾ. ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ