ಮಂಗಳೂರು: ಬಹು ಓದು ಬಳಗ ಮಂಗಳೂರು ಮತ್ತು ಆಕೃತಿ ಆಶಯ ಪಬ್ಲಿಕೇಷನ್ ಮಂಗಳೂರು- ಸಹಯೋಗದೊಂದಿಗೆ 'ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ' ಸಂಪಾದಿತ ಕೃತಿ ಬಿಡುಗಡೆ ಸಮಾರಂಭ ಜ.19ರಂದು ಭಾನುವಾರ ಸಂತ ಅಲೋಶಿಯಸ್ ಕಾಲೇಜು ಮಂಗಳೂರಿನ ರಾಬರ್ಟ್ ಸಿಕ್ವೇರಾ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಡಾ. ಸತೀಶ್ ಚಿತ್ರಾಪು ಮತ್ತು ಸೋಮಶೇಖರ್ ಹಾಸನಡ್ಕ ಅವರು ಈ ಕೃತಿಯ ಪ್ರಧಾನ ಸಂಪಾದಕರು.
ಮಂಗಳೂರು ವಿಶ್ವವಿದ್ಯಾನಿಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಸಬಿಹಾ ಭೂಮಿಗೌಡ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರೊ. ರಾಜಲಕ್ಷ್ಮಿ ಎನ್.ಕೆ. ಪುಸ್ತಕ ವಿಮರ್ಶೆ ಮಾಡಲಿದ್ದಾರೆ.
ಮುಖ್ಯ ಅತಿಥಿಯಾಗಿ ಗೋವಿಂದದಾಸ ಕಾಲೇಜು ಸುರತ್ಕಲ್ ನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಪಿ. ಪಾಲ್ಗೊಳ್ಳಲಿದ್ದಾರೆ. ಕೃತಿಯ ಪ್ರಕಾಶಕರಾದ ಕಲ್ಲೂರು ನಾಗೇಶ ಉಪಸ್ಥಿತರಿರುತ್ತಾರೆ. ಡಾ. ಆಶಾಲತಾ ಚೇವಾರ್ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ