ಬೆಂಗಳೂರು: ಈಜುಕೊಳದ ಬಡಾವಣೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬುಧವಾರ ಏರ್ಪಡಿಸಿದ್ದ ಭಜನಾ ಕಾರ್ಯಕ್ರಮದಲ್ಲಿ ವಿದ್ಯಾರಣ್ಯಪುರದ ಶ್ರೀ ವಿಜಯ ವಿಠ್ಠಲ ಭಜನಾ ಮಂಡಳಿಯ ಹರಿಣಿ ಮತ್ತು ಸಂಗಡಿಗರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಕೃತಿಗಳನ್ನು ಪ್ರಸ್ತುತಪಡಿಸಿದರು.
ನಂತರ ಡಾ|| ಆನಂದತೀರ್ಥಾಚಾರ್ಯ ಮಾಳಗಿಯವರಿಂದ "ಸುಂದರಕಾಂಡ" ವಿಷಯವಾಗಿ ಧಾರ್ಮಿಕ ಪ್ರವಚನ ಜರುಗಿತು. ಈ ಸಂದರ್ಭದಲ್ಲಿ ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್, ಮಠದ ಪದಾಧಿಕಾರಿಗಳು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ