ರಾಷ್ಟ್ರೀಯ ಯುವ ದಿನಾಚರಣೆ ಅರ್ಥಪೂರ್ಣ ಆಚರಣೆ.
ಬಳ್ಳಾರಿ: ಶ್ರೀ ರಾಮಕೃಷ್ಣ ವಿವೇಕಾನಂದ ಕೇಂದ್ರ, ಗಾಂಧಿನಗರ, ಬಳ್ಳಾರಿ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದರ 162 ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯನ್ನು ಬಹಳ ಅರ್ಥಪೂರ್ಣದಿಂದ ಆಚರಿಸಿಲಾಯಿತು.
ಈ ಒಂದು ಕಾರ್ಯಕ್ರಮದಲ್ಲಿ ಸುಮಾರು 200 ಕ್ಕೂ ಹೆಚ್ಚು ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಶ್ರಮದ ಕಾರ್ಯದರ್ಶಿಗಳಾದ ಜಗನ್ನಾಥ ಮತ್ತು ಮಾಜಿ ಕಾರ್ಯದರ್ಶಿಗಳಾದ ವಿಜಯ ಕುಮಾರ ಅವರು ಹಾಗೂ ಇನ್ನಿತರ ಆಶ್ರಮದ ಸಮಿತಿ ಸದಸ್ಯರು ಉಪಸ್ಥಿತಿದ್ದರು.
ಈ ಕಾರ್ಯಕ್ರಮದ ದಿಕ್ಸೂಚಿ ಭಾಷಣವನ್ನು ರಾಜಶೇಖರ್ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಲ್ಲಿ ಸ್ವಾಮಿ ವಿವೇಕಾನಂದರ ಚಿಂತನೆಯ ಕುರಿತು ಪ್ರೇರಣೆಯ ಉಪನ್ಯಾಸ ನೀಡಿದರು..ಸಾಕಷ್ಟು ಯುವಕರು ಹಿರಿಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ