ಬಳ್ಳಾರಿ; ಬಿಡಿಸಿಸಿಐನಲ್ಲಿ `ಜಿಎಸ್‌ಟಿ ಅಮ್ನಿಸ್ಟಿ ಮತ್ತು ಅಧಿಕಾರಿಗಳ ಜೊತೆ ಸಂವಾದ

Upayuktha
0

 



ಬಳ್ಳಾರಿ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಶ್ರಯದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೂತನ ಸಭಾಂಗಣದಲ್ಲಿ `ಜಿಎಸ್ಟಿ ಅಮ್ನಿಸ್ಟಿ ಹಾಗೂ ಅಧಿಕಾರಿಗಳ ಜೊತೆ ಸಂವಾದ'ನೆರವೇರಿತು.


ವಾಣಿಜ್ಯ ತೆರಿಗೆ ಇಲಾಖೆಯ ದಾವಣಗೆರೆಯ ಜಂಟಿ ಆಯುಕ್ತರಾಗಿರುವ  ಸೋನಾಲ್ ಎನ್. ನಾಯಕ್ ಮತ್ತು ಬಳ್ಳಾರಿಯ ಜಂಟಿ ಆಯುಕ್ತರಾಗಿರುವ ಎರೇಗೌಡ ಅವರು, ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಿಎಸ್ಟಿ ಪಾವತಿಸುವ ಕುರಿತು ವ್ಯಾಪಾರಿಗಳು ಮತ್ತು ಉದ್ಯಮಿಗಳು ಪ್ರತಿನಿತ್ಯ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪ್ರಶ್ನೆಗಳಿಗೆ ಪರಿಹಾರ ಸೂಚಿಸಲು ಈ ಸಭೆಯು ನೆರವಾಗಲಿದೆ. ಉದ್ಯಮಿಗಳು ಮತ್ತು ವ್ಯಾಪಾರಿಗಳು ಸುಲಲಿತವಾಗಿ ತೆರಿಗೆ ಪಾವತಿಸುವಂತೆ ಮಾಡಲು ಮಾರ್ಗದರ್ಶನ ನೀಡಲಾಗುತ್ತದೆ ಎಂದರು.


 ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿರುವ ಯಶವಂತರಾಜ್ ನಾಗಿರೆಡ್ಡಿ ಅವರು, ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸ್ವಾಗತಿಸಿ, ವಾಣಿಜ್ಯೋದ್ಯಮಿಗಳು, ವ್ಯಾಪಾರಿಗಳು ಮತ್ತು ತೆರಿಗೆ ಪಾವತಿದಾರರು, ಕೈಗಾರಿಕೋದ್ಯಮಿಗಳು, ಜಿಎಸ್ಟಿ ಪಾವತಿಸುವಲ್ಲಿ ವಿವಿಧ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ತಮ್ಮ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಲ್ಲಿ ಇಲಾಖೆಯೇ ನೇರವಾಗಿ ನಮ್ಮೊಂದಿಗೆ ಸಂವಾದ ನಡೆಸಲು ಮುಂದಾಗಿರುವುದು ಸ್ವಾಗತಾರ್ಹ. 


ಈ ಸಂವಾದವು ಅನೇಕ ವ್ಯಾಪಾರಿಗಳು - ಉದ್ಯಮಿಗಳ ಸಮಸ್ಯೆಳಿಗೆ ಪರಿಹಾರ ಸೂಚಿಸುವ ವಿಶ್ವಾಸವಿದೆ ಎಂದರು. ವಾಣಿಜ್ಯ ತೆರಿಗೆ ಇಲಾಖೆಯ ಬಳ್ಳಾರಿ ಕಚೇರಿಯ ಡೆಪ್ಯುಟಿ ಕಮಿಷನರ್ ಜೈನುಲ್ಲಾ ಇನಾಮ್ದಾರ್ ಮತ್ತು ಅಸಿಸ್ಟೆಂಟ್ ಕಮಿಷನರ್ ಆಗಿರುವ ಅಭಿಷೇಕ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದರು. 


 ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದನಾರ್ಪಣೆ ಸಲ್ಲಿಸಿದರು.


 ಸಭೆಯಲ್ಲಿ ಉಪಸ್ಥಿತರಿದ್ದ ವ್ಯಾಪಾರಿಗಳು - ಉದ್ಯಮಿಗಳು, ವಿದ್ಯಾರ್ಥಿಗಳು ಅಧಿಕಾರಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳಿಗೆ ಪ್ರಶ್ನೆಗಳನ್ನು ಕೇಳುವ ಮೂಲಕ, ತೆರಿಗೆ ಪಾವತಿಸುವಲ್ಲಿನ ದೈನಂದಿನ ಸಮಸ್ಯೆಗಳಿಗೆ ಉತ್ತರಗಳನ್ನು ಪಡೆದರು. 


ಬಳ್ಳಾರಿಯ ಸಿಎ ಅಸೋಸಿಯೇಷನ್, ಟ್ಯಾಕ್ಸ್ ಪ್ರಾಕ್ಟೀಷನರ್ಸ್ ಅಸೋಸಿಯೇಷನ್, ಕಾಟನ್ ಅಸೋಸಿಯೇಷನ್, ರೈಸ್ ಮಿಲ್ ಅಸೋಸಿಯೇಷನ್, ಗಾರ್ಮೆಂಟ್ಸ್ ಅಸೋಸಿಯೇಷನ್, ಕೋಲ್ಡ್ಸ್ಟೋರೇಜ್ ಅಸೋಸಿಯೇಷನ್, ಫುಟ್ವೇರ್ ಅಸೋಸಿಯೇಷನ್, ಕರ್ನಾಟಕ ಸ್ಪಾಂಜ್ ಐರನ್ ಮ್ಯಾನ್ಯುಫ್ಯಾಕ್ಚರರ್ಸ್ ಅಸೋಸಿಯೇಷನ್, ಜಿಲ್ಲಾ ಕೈಗಾರಿಕಾ ಅಸೋಸಿಯೇಷನ್ ಹಾಗೂ ಇನ್ನಿತರ ಸಂಘ - ಸಂಸ್ಥೆಗಳ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top