ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜ್‌ನಲ್ಲಿ 19ನೇ ವರ್ಷದ ವಾರ್ಷಿಕೋತ್ಸವ

Upayuktha
0

 



ಬಳ್ಳಾರಿ: ನಗರದ ಡಾ||ರಾಜ್‌ಕುಮಾರ್ ರಸ್ತೆಯಲ್ಲಿರುವ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜ್‌ನಲ್ಲಿ 19ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರನ್ನು ಶಾಲೆಯ ಶಿಕ್ಷಕಿ ಶ್ವೇತಾ ತುಮ್ಮಾರವರು ಸ್ವಾಗತಿಸಿದರು.ಗಣ್ಯಮಾನ್ಯರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

 

ಶಾಲೆಯ ಪ್ರಾಂಶುಪಾಲರಾದ ಜೆ.ಅನೀಲ್ ಕುಮಾರ್‌ರವರು ಶಾಲೆಯ ವಾರ್ಷಿಕ ವರದಿಯನ್ನು ಮಂಡಿಸುತ್ತಾ ಶಾಲೆಯ 19 ವರ್ಷಗಳ ಸಾಧನೆಗಳನ್ನು ವಿವರಿಸುತ್ತಾ ಸತತವಾಗಿ 13 ವರ್ಷಗಳಿಂದ 10ನೇ ತರಗತಿಯ ಪರೀಕ್ಷೆಯಲ್ಲಿ 100% ಫಲಿತಾಂಶ ಬರುತ್ತಿರುವುದನ್ನು ತಿಳಿಸಿದರು. 


ಮುಖ್ಯ ಅತಿಥಿಗಳಾದ ಹಂಪನಗೌಡ ಬಾದರ್ಲಿಯವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಂಪನಗೌಡ ಬಾದರ್ಲಿಯವರು ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳು ವಿಧ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಕೊಡುವುದರ ಬಗ್ಗೆ ಶ್ಲಾಘಿಸುತ್ತಾ ಶಿಕ್ಷಣದ ಮಹತ್ವವನ್ನು ಕುರಿತು ವಿವರಿಸಿದರು. 


ಟಿ.ಇ.ಹೆಚ್.ಆರ್.ಡಿ. ಟ್ರಸ್ಟ್ ಹಾಗೂ ಬಿಪಿಎಸ್‌ಸಿ ಶಾಲೆಯ ಅಧ್ಯಕ್ಷರಾದ ಡಾ||ಎಸ್.ಜೆ.ವಿ.ಮಹಿಪಾಲ್‌ರವರು ಮಾತನಾಡುತ್ತಾ ಬಳ್ಳಾರಿಯಲ್ಲಿ ಆಂಗ್ಲ ಮಾಧ್ಯಮದ ಐಸಿಎಸ್‌ಇ ಪಠ್ಯಕ್ರಮ ಓದಲು ಮೊದಲು ವಿಧ್ಯಾರ್ಥಿಗಳು ಪರಸ್ಥಳಕ್ಕೆ ಹೋಗಿ ಪಡುತ್ತಿರುವ ಕಷ್ಟವನ್ನು ಅರಿತು ತಮ್ಮ ತಾಯಿಯವರು ತೆಗೆದುಕೊಂಡ ಧೃಡನಿರ್ಧಾರದಿಂದ ಬಳ್ಳಾರಿಯಲ್ಲಿ ಐಸಿಎಸ್‌ಇ ಪಠ್ಯಕ್ರಮದ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಅಂಡ್ ಕಾಲೇಜ್ ನಿರ್ಮಾಣವಾಗಿರುವ ಕುರಿತು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸುತ್ತಾ ವಿಧ್ಯಾರ್ಥಿಗಳಿಗೆ ಶುಭವನ್ನು ಕೋರಿದರು.


ಟಿ.ಇ.ಹೆಚ್.ಆರ್.ಡಿ. ಟ್ರಸ್ಟಿಗಳಾದ ಪ್ರೃಥ್ವಿರಾಜ್  ಭುಪಾಲ್‌ರವರು ಶೈಕ್ಷಣಿಕವಾಗಿ ವಿಧ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆಯಲು ಆತ್ಮ ವಿಶ್ವಾಸವಿರಬೇಕೆಂದು ತಿಳಿಸಿದರು. ನಂತರ 2023-24 ಸಾಲಿನ 10 ನೇ ತರಗತಿಯಲ್ಲಿ ಅತೀ ಹೆಚ್ಚು ಶೇಕಡವಾರು 95%, ಅಂಕಗಳನ್ನು ಗಳಿಸಿದ ವಿದ್ಯಾರ್ಥಿನಿಯಾದ ಕುಮಾರಿ ಜೆ.ಶ್ರೀವಲ್ಲಿಗೆ ಅಕಾಡೆಮಿಕ್ ಎಕ್ಸೆಲೆನ್ಸ್ ಪಾರಿತೋಷಕವನ್ನು ಮುಖ್ಯ ಅತಿಥಿಗಳು ವಿತರಿಸಿದರು.


ಗಣ್ಯರಾದ ಎಂ.ಅಮರೇಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಳೆದ ವರ್ಷದ ಶಾಲೆಯ ವಾರ್ಷಿಕ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ತರಗತಿವಾರು ವಿಧ್ಯಾರ್ಥಿಗಳಿಗೆ ಕೂಡ ಪಾರಿತೋಷಕವನ್ನು ವಿತರಿಸಲಾಯಿತು. ತದನಂತರ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.  ಕೊನೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿಯರಾದ  ಶಿಲ್ಪಾರವರು ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top