ಬಳ್ಳಾರಿ; ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ

Upayuktha
0

ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡೋಣ: ನ್ಯಾ.ಸಿದ್ಧಲಿಂಗ ಪ್ರಭು



ಬಳ್ಳಾರಿ: ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಗುರುವಾರ ಸ್ವಚ್ಛತಾ ಕಾರ್ಯ ನಡೆಯಿತು.ಜಿಲ್ಲಾ ನ್ಯಾಯಾಲಯದ ವಿವಿಧ ನ್ಯಾಯಾಧೀಶರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿ ಸ್ವಚ್ಛತೆ ಕೈಗೊಂಡರು.


ಈ ವೇಳೆ ಮಾತನಾಡಿದ ಪ್ರಧಾನ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಹುತಾತ್ಮರಾದ ದಿನದ ನೆನಪಿಗಾಗಿ ರಾಷ್ಟ್ರೀಯ ಸ್ವಚ್ಛತಾ ದಿನವಾಗಿ ಆಚರಿಸಲಾಗುತ್ತದೆ. ಎಲ್ಲರೂ ಸ್ವಚ್ಛತೆ ಮತ್ತು ನೈರ್ಮಲ್ಯತೆಗೆ ಪ್ರಾಮುಖ್ಯತೆ ನೀಡೋಣ ಎಂದು ಹೇಳಿದರು.


ಬಳಿಕ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಮಾತನಾಡಿ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ನಂತರ ಮಹಾತ್ಮ ಗಾಂಧೀಜಿಯವರ ಹುತಾತ್ಮರ ದಿನದ ಅಂಗವಾಗಿ ಜಿಲ್ಲಾ ನ್ಯಾಯಾಲಯದಲ್ಲಿ ಭಜನೆ ಮತ್ತು ಮೌನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತ್ತು.


ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್.ಹೊಸಮನೆ ಅವರು ಮಾತನಾಡಿ, ಸ್ವಚ್ಛತೆಯು ಆರೋಗ್ಯಕರ ಮತ್ತು ಗುಣಮಟ್ಟದ ಜೀವನದ ಅವಿಭಾಜ್ಯ ಅಂಗವಾಗಿದ್ದು, ಹಾಗಾಗಿ ನಾವೆಲ್ಲರೂ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳೋಣ ಎಂದರು.


ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಘವೇಂದ್ರ ಗೌಡ.ಬಿ.ಜಿ., 2ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಜಿ.ಪ್ರಮೋದಾ, 4ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಾಸುದೇವ ರಾಧಕಾಂತ್ ಗುಡಿ, ಪ್ರಿನ್ಸಿಪಲ್ ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್.


ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಪ್ರಿನ್ಸಿಪಲ್ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಅಮೀತ್ ಘಟ್ಟಿ, 1ನೇ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸಣ್ಣಹನಮಗೌಡ, 4ನೇ ಅಪರ ಸಿವಿಲ್ ನ್ಯಾಯಾಧೀಶರಾದ ರೂಪ ಚಿನಿವಾರ, 5ನೇ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top