ಸಂಭಾವ್ಯ ಗಂಡಾಂತರದಿಂದ ಗರ್ಭಿಣಿಯರ ಪಾರುಮಾಡಲು ನಿಗಾವಹಿಸಿ: ಬಳ್ಳಾರಿ ಡಿಸಿ

Upayuktha
0

ಬಳ್ಳಾರಿ: ಗಂಡಾಂತರ ಗರ್ಭಿಣಿ ಮಹಿಳೆಯರ ಮೇಲೆ ನಿರಂತರ ನಿಗಾ ವಹಿಸುವ ಮೂಲಕ ತಾಯಿ-ಶಿಶು ಮರಣ ಸಂಭವಿಸದಂತೆ ವೈದ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ತಡೆಗಟ್ಟುವಿಕೆ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಗಂಡಾಂತರ ಗರ್ಭಿಣಿ ಮಹಿಳೆಯರಿಗೆ ರಕ್ತಹೀನತೆ, ಪೌಷ್ಠಿಕ ಆಹಾರದ ಕೊರತೆ, ಕಬ್ಬಿಣಾಂಶ ಮಾತ್ರೆಗಳ ಸೇವನೆ ಕುರಿತು ಆಶಾಕಾರ್ಯಕರ್ತೆಯರು ಮನೆ ಭೇಟಿ ಸಂದರ್ಭದಲ್ಲಿ ಸೂಚಿಸಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆಗೆಯೂ ಆದ್ಯತೆ ನೀಡಬೇಕು ಎಂದು ತಿಳಿಸಿದರು.


ಗ್ರಾಮೀಣ ಪ್ರದೇಶಗಳಲ್ಲಿ ತಾಯಂದಿರ ಆರೈಕೆ ಕುರಿತು ಕುಟುಂಬದ ಸದಸ್ಯರಿಗೆ ತಿಳಿ ಹೇಳಬೇಕು. ಮುಖ್ಯವಾಗಿ ಚೊಚ್ಚಲು ಗರ್ಭಿಣಿ ಅವಧಿಯಲ್ಲಿ ವೈದ್ಯಕೀಯ ಕಾರಣಗಳಿಂದ ಗುರ್ತಿಸಲ್ಪಡುವ ಗಂಡಾಂತರ ಗರ್ಭಿಣಿ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಲು ಆದ್ಯತೆ ನೀಡಬೇಕು. ಮಗು ಜನನದ ಬಳಿಕ ತೂಕದ ಆಧಾರದ ಮೇಲೆಯೂ ಕಾಳಜಿ ವಹಿಸುವ ಮೂಲಕ ಜಾಗ್ರತೆ ವಹಿಸಬೇಕು ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್.ಸಂಕನೂರು ಅವರು ಮಾತನಾಡಿ, ಹೆರಿಗೆಯಾದ ನಂತರವು ನಿಗಧಿತ ಕಾಲಾವಧಿಯೊಳಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಅವುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಕೇವಲ ದಿನನಿತ್ಯದ ಔಷಧಿಗಳ ಶಿಫಾರಸ್ಸು ಮಾಡಬಾರದು ಎಂದು ವೈದ್ಯಾಧಿಕಾರಿಗಳಿಗೆ ತಿಳಿಸಿದರು.


ಸಭೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಪ್ರತಿ ತಿಂಗಳು 9 ಮತ್ತು 24 ತಾರೀಖಿನಂದು ಆರೋಗ್ಯ ಕೇಂದ್ರಗಳಲ್ಲಿ ಗಭೀಣಿ ಮಹಿಳೆಯರಿಗಾಗಿಯೇ ನೀಡುವ ಊಟದ ಜೊತೆಗೆ ಪೌಷ್ಠಿಕಾಂಶಯುಕ್ತ ಆಹಾರ ನೀಡುವ ಕುರಿತು ಚರ್ಚಿಸಲಾಯಿತು.


ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಬಿಮ್ಸ್ ತಜ್ಞರಾದ ಡಾ.ಚಂದ್ರಶೇಖರ್, ಡಾ.ಶ್ರೀಕಾಂತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
To Top