ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಪಿ. ಪ್ರಮೋದ್

Upayuktha
0




ಬಳ್ಳಾರಿ: ಜಿಲ್ಲಾ ಕೇಂದ್ರದಲ್ಲಿ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ, ಫೆ.05 ರಂದು ಸವಿತಾ ಮಹರ್ಷಿ ಜಯಂತಿ ಹಾಗೂ ಫೆ.10 ರಂದು ಕಾಯಕ ಶರಣರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ತಿಳಿಸಿದರು.


ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.


ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹನೀಯರ ಜಯಂತಿಯನ್ನು ಶಿಷ್ಠಾಚಾರದನ್ವಯ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ದು, ವಿವಿಧ ಇಲಾಖೆಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.


ವಿವಿಧ ಮಹನೀಯರ ಜಯಂತಿ ದಿನಗಳಂದು ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜ್ ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್ ಪೇಟೆ ಪೊಲೀಸ್ ಠಾಣೆ ಮುಂಭಾಗ, ತೇರುಬೀದಿ ರಸ್ತೆ, ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣದವರೆಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದರು.


ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಮಾತನಾಡಿ, ಮಹನೀಯರ ಜಯಂತಿ ಮೆರವಣಿಗೆಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನು ಕರೆಸಲಾಗುವುದು. ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.


ವೇದಿಕೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ವಚನ ಗಾಯನ, ಸುಗಮ ಸಂಗೀತ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.


ಸಭೆಯಲ್ಲಿ ಸಮಾಜದ ಮುಖಂಡರುಗಳು, ಸಮಾಜದಲ್ಲಿ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ವಿಶೇಷ ಸಾಧನೆಗೈದವರನ್ನು ಸನ್ಮಾನಿಸಬೇಕು ಎಂದು ಪ್ರಸ್ತಾಪಿಸಿದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಲು ತಮ್ಮ ಸಲಹೆ-ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ, ತೋಟಗಾರಿಕೆ, ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top