ಬಳ್ಳಾರಿ: ಶ್ರೀ ವಾಸವಿ ವಿದ್ಯಾಲಯದಲ್ಲಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ವಾರ್ಷಿಕ ವೈದ್ಯಕೀಯ ತಪಾಸಣೆ ಯಶಸ್ವಿಯಾಗಿ ನಡೆಸಲಾಯಿತು. ಈ ತಪಾಸಣೆಯಲ್ಲಿ ನರ್ಸರಿಯಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ಯಾರ್ಥಿಗಳ ದೇಹಾರೋಗ್ಯದ ಪ್ರಮುಖ ಅಂಶಗಳನ್ನು ಪರೀಕ್ಷಿಸಲು ನುರಿತ ವೈದ್ಯರ ತಂಡ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ತೂಕ, ಎತ್ತರ, ದೃಷ್ಟಿಶಕ್ತಿಯ ಪರೀಕ್ಷೆ, ಹೃದಯ ಮತ್ತು ಶ್ವಾಸಕೋಶದ ಸ್ಥಿತಿ, ದಂತ ಆರೋಗ್ಯ ಮತ್ತು ಇತರ ಮೂಲಭೂತ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.
ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬೇಕು ಎಂಬ ಸಂದೇಶವನ್ನು ಸರ್ಕಾರಿ ಡಾಕ್ಟರ್ಗಳು ನೀಡಿದರು. ಪೋಷಕರು ಮತ್ತು ಶಿಕ್ಷಕರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿತು. ಶಾಲೆಯ ಆಡಳಿತ ಮಂಡಳಿ ವೈದ್ಯಕೀಯ ತಪಾಸಣೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ