ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಗೆ ದಾಳಿ, ಲಕ್ಷಾಂತರ ಲೂಟಿ ಪ್ರಕರಣ: ತನಿಖೆಗೆ ಸ್ಪೀಕರ್ ಖಾದರ್ ಸೂಚನೆ

Upayuktha
0



ಮಂಗಳೂರು: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಸುಲೈಮಾನ್ ಹಾಜಿ ಮನೆಗೆ ದಾಳಿ, ಲಕ್ಷಾಂತರ ರೂಪಾಯಿ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಗಂಭೀರ ಚರ್ಚೆ ನಡೆಸಿ, ಆರೋಪಿಗಳ ಪತ್ತೆ ಹಚ್ಚಲು ಕಠಿಣ ಕ್ರಮಕ್ಕೆ ಯು.ಟಿ ಖಾದರ್ ವಿಧಾನಸಭಾಧ್ಯಕ್ಷ ಸೂಚನೆ ನೀಡಿದ್ದಾರೆ.


ಉದ್ಯಮಿ ಸಿಂಗಾರಿ ಬೀಡಿ ಇದರ ಮಾಲೀಕರಾದ ಸುಲೈಮಾನ್ ಹಾಜಿ ಅವರ ಮನೆಗೆ ನಿನ್ನೆ ರಾತ್ರಿ ಸರಿಸುಮಾರು 8:30ಕ್ಕೆ ತಮಿಳುನಾಡು ನೋಂದಣಿ ಸಂಖ್ಯೆ ಇನ್ನೋವಾ ಕಾರ್ ನಲ್ಲಿ ಬಂದ ಖದೀಮರು ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಮನೆಯಲ್ಲಿದ್ದ ಹಣ ಮೊಬೈಲ್ ಹಾಗೂ ದಾಖಲೆ ಪತ್ರವನ್ನು ದೋಚಿ ಪರಾರಿಯಾದ ಘಟನೆ ನಡೆದಿದ್ದು ಸಭಾಧ್ಯಕ್ಷ ಯು.ಟಿ ಖಾದರ್ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.


ಈ ಬಗ್ಗೆ ಗೃಹ ಇಲಾಖೆಯ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಭಾಧ್ಯಕ್ಷ ಯು.ಟಿ ಖಾದರ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಶೀಘ್ರ ಪತ್ತೆಗೆ ಕ್ರಮ ಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಅದರಂತೆ ಗೃಹ ಇಲಾಖೆ ಡಿವೈಎಸ್‌ಪಿ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಿದ್ದು ತನಿಖೆಯನ್ನು ಚುರುಕುಗೊಳಿಸಿದ್ದಾರೆ.


ಸುಲೈಮಾನ್ ಹಾಜಿ ಹಾಗೂ ಕುಟುಂಬಸ್ಥರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು.ಟಿ ಖಾದರ್ ಧೈರ್ಯ ತುಂಬಿ ಧೃತಿಗೆಡದಂತೆ ತಿಳಿಸಿದ್ದು ಖದೀಮರು ಶೀಘ್ರ ಬಂಧನವಾಗುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top