ಚೇರ್ಕಾಡಿ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೇೂತ್ಸವ

Upayuktha
0


ಬ್ರಹ್ಮಾವರ: ಇಂದಿನ ನಮ್ಮ ಶಿಕ್ಷಣ ಪದ್ಧತಿ ವಿದ್ಯಾರ್ಥಿಗಳ ಮನದ ಬಾಗಿಲಿಗೆ ಹಾಕಿದ ತಡೆಗಳನ್ನು ದಾಟಲು ಕಲಿಸುತ್ತಿಲ್ಲ. ಈ ತಡೆಗಳೆಂದರೆ ವಿಶ್ವಾಸದ ಕೊರತೆ, ಕೀಳರಿಮೆ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಕೊರತೆ, ಇಚ್ಛಾಶಕ್ತಿಯ ಕೊರತೆ, ಕೌಶಲ ಶಕ್ತಿಯ ಕೊರತೆ, ಸಂವಹನ ಸಾಮರ್ಥ್ಯದ ಕೊರತೆ. ನಾವು ಅಂಕಗಳಿಕೆಗೆಯ ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಬೆಳವಣಿಗೆ ಬೇಕಾದ ಪೂರಕ ಶಿಕ್ಷಣ ನೀಡುವಲ್ಲಿ  ವಿದ್ಯಾರ್ಥಿಗಳನ್ನು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೇೂತ್ಸಾಹಿಸಬೇಕಾದ ಅಗತ್ಯ ಇದೆ ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ, ಅಂಕಣಕಾರ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.


ಚೇರ್ಕಾಡಿ ಶಾರದಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೇೂತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಬಿ. ಮಹಾಬಲೇಶ್ವರ ಉಡುಪರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೇರ್ಕಾಡಿ ಶಾರದಾ ಹೈಸ್ಕೂಲು ಮುಖ್ಯಸ್ಥ ಸಿ. ಮಂಜುನಾಥ್ ನಾಯ್ಕ ಮಾತನಾಡಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಎಚ್. ಸುದರ್ಶನ ಹೆಗ್ಡೆ ಸ್ವಾಗತಿಸಿ ಪ್ರಸ್ತಾವನೆಗೈದರು. ಸಮಿತಿಯ ಕೇೂಶಾಧಿಕಾರಿ ಶಶಿಧರ್ ಶೆಟ್ಟಿ, ಆಡಳಿತಾಧಿಕಾರಿ ದಿನಕರ್ ಆರ್.ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ಮುಖ್ಯೇೂಪಾಧ್ಯಾಯಿನಿ ಚೈತ್ರಾ ಎಂ.ಶೆಟ್ಟಿ ಶಾಲಾ ವರದಿ ವಾಚಿಸಿದರು. ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಆರೂರು ತಿಮ್ಮಪ್ಪ ಶೆಟ್ಟಿ ವಂದಿಸಿದರು. ವಿವಿಧ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಯಕ್ಷಗಾನ ರಂಗದಲ್ಲಿ ವಿಶೇಷ ಸಾಧನಗೈದ ಪ್ರಶಸ್ತಿ ಪುರಸ್ಕೃತ ಚೇರ್ಕಾಡಿ ಮಂಜುನಾಥ ಪ್ರಭು ಅವರನ್ನು ಶಾಲಾ ವತಿಯಿಂದ ಸಂಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top