ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರದಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ನಾಳೆ (ಜ.10) ಆಯೋಜಿಸಲಾಗಿದೆ.
ಶುಕ್ರವಾರ ಅಪರಾಹ್ನ 2.30 ಘಂಟೆಗೆ ಪೆರೇಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪೆರೇಸಂದ್ರ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶ್ರೀಮತಿ ಗಂಗರತ್ನಮ್ಮರವರ ಅಧ್ಯಕ್ಷತೆಯಲ್ಲಿ ಮತ್ತು ಗ್ರಾಮ ಪಂಚಾಯತಿ ನೋಡಲ್ ಅಧಿಕಾರಿ- ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ ಜಿ.ಎ ಸಮ್ಮುಖದಲ್ಲಿ ಹಾಗೂ ಗ್ರಾಮಾಂತರ ಟ್ರಸ್ಟ್‌ನ ವ್ಯವಸ್ಥಾಪಕಿ ಉಷಾ ಶೆಟ್ಟಿ ಅವರ ಸಹಯೋಗದೊಂದಿಗೆ ಮಕ್ಕಳ ವಿಶೇಷ ಗ್ರಾಮಸಭೆ ಹಮ್ಮಿಕೊಳ್ಳಲಾಗಿದೆ.
ಈ ಗ್ರಾಮಸಭೆಗೆ ಗ್ರಾಮ ಪಂಚಾಯತಿ ಸದಸ್ಯರು, ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಗ್ರಾಮ ಸಭೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕಾಗಿ ಪ್ರಕಟಣೆ ಕೋರಿದೆ.
ಗ್ರಾಮ ಸಭೆಯಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳಿಗೆ ಸಂಬಂಧಪಟ್ಟ ಮಾಹಿತಿ ಅವರಿಂದಲೇ ಪಡೆದು ಪರಿಹಾರವನ್ನು ಕಂಡುಕೊಳ್ಳುವುದು, ಅಪೌಷ್ಠಿಕ ಆಹಾರದ ಬಗ್ಗೆ ಅರಿವು ಮೂಡಿಸುವುದು, ಬಾಲ ಕಾರ್ಮಿಕ ವೃತ್ತಿ ತಡೆಗಟ್ಟುವ ಬಗ್ಗೆ, ಬಾಲ್ಯ ವಿವಾಹ ತಡೆಗಟ್ಟುವುದು, ಮಹಿಳಾ ಮತ್ತು ಮಕ್ಕಳ ಸಾಗಾಣಿಕೆ ಬಗ್ಗೆ ಅರಿವು ಮೂಡಿಸುವುದು, ಸಂಪೂರ್ಣ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು ಹಾಗೂ ಮಕ್ಕಳ ಆಸಕ್ತಿಯ ಮೇರೆಗೆ ಇತರ ವಿಷಯಗಳನ್ನು ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ