ಧರ್ಮಸ್ಥಳ ಪೊಲೀಸ್ ಠಾಣೆಗೆ ಮಂಗಳವಾರ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಲಾಯಿತು.
ಉಜಿರೆ: ಉಡುಪಿಯ ಭಾರತೀಯ ಜೀವವಿಮಾ ನಿಗಮದ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ “ವಿಮಾಗ್ರಾಮ” ಕಾರ್ಯಕ್ರಮದಡಿಯಲ್ಲಿ ಮಂಗಳವಾರ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸಲಾಯಿತು.
ಉಡುಪಿ ಜೀವವಿಮಾ ನಿಗಮದ ವಿಭಾಗೀಯ ಕಚೇರಿ ವಿಮಾ ಪ್ರಬಂಧಕರಾದ ದಿನೇಶ ಪ್ರಭು ಮಾತನಾಡಿ ಜೀವವಿಮಾ ನಿಗಮದ ಸೇವಾ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಧರ್ಮಸ್ಥಳ ಕೇಂದ್ರ ಕಚೇರಿಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷರಾದ ಕಿಶೋರ್ ಮಾತನಾಡಿ, ಕುಡಿಯುವ ನೀರಿನ ಮೂಲ ಸೌಕರ್ಯ ಒದಗಿಸಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಶುಭಾಶಂಸನೆ ಮಾಡಿದರು. ಧರ್ಮಸ್ಥಳ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಮರ್ಥ್, ಬೆಳ್ತಂಗಡಿ ಯೋಜನಾಧಿಕಾರಿ ಸುರೇಂದ್ರ ಮತ್ತು ಸತೀಶ್ ಎಂ. ಉಪಸ್ಥಿತರಿದ್ದರು.
ವಿಮಾ ಸಮನ್ವಯಾಧಿಕಾರಿ ಹೇಮಲತಾ ಹೆಗಡೆ ಸ್ವಾಗತಿಸಿದರು. ಪೊಲೀಸ್ ಸಿಬ್ಬಂದಿ ಚೈತ್ರಾ ಧನ್ಯವಾದವಿತ್ತರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ