ಪುತ್ತೂರು: ವ್ಯಕ್ತಿಗಳು ಶಿಕ್ಷಣವನ್ನು ಪಡೆಯುವುದರೊಂದಿಗೆ ಸಂಸ್ಕಾರವನ್ನೂ ಕಲಿಯಬೇಕು, ಕಾರ್ಪೋರೇಟ್ ಬದುಕಿನಲ್ಲಿ ಸನಾತನ ಆಚಾರ ವಿಚಾರಗಳನ್ನು ಉಳಿಸಿಕೊಂಡು ಬೆಳೆಸಬೇಕು. ಅದು ಜೀವನಕ್ಕೆ ಆಯಾಮವನ್ನು ಕಲ್ಪಿಸಿಕೊಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಹೇಳಿದರು.
ಪುತ್ತೂರು ದ್ವಾರಕಾ ಪ್ರತಿಷ್ಠಾನದ ಸಹಯೋಗದಲ್ಲಿ "ಜೀವನ ಸಾರ ಸಂಗ್ರಹ" ಸರಣಿ ಕಾರ್ಯಕ್ರಮದ ಉದ್ಘಾಟನೆ ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ), ಪುತ್ತೂರು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿಕಸನ ಸ್ಟುಡಿಯೋದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿವೇಕಾನಂದ ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತಾಡಿ, ಸಂಸ್ಕೃತಿ ಆಚಾರವಿಚಾರಗಳ ಒಪ್ಪದ ಮಂದಿಗಳು ಇರುವ ಸಮಾಜದಲ್ಲಿ, ಅದನ್ನು ಒಪ್ಪಿಕೊಂಡು ಒಳ್ಳೆಯ ಸಂಗತಿಗಳನ್ನು ಜನಮಾನಸಕ್ಕೆ ತಲುಪಿಸುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಮಾತಾಡಿ, ನಮ್ಮ ನಡೆನುಡಿಗಳು ಸಂಸ್ಕಾರವನ್ನು ಬಿಂಬಿಸುತ್ತವೆ, ಹಾಗಾಗಿ ಶಿಕ್ಷಣ ವಿದ್ಯಾರ್ಥಿಗಳಿಗೆ ಬದಲಾವಣೆಯ ಜೊತೆಜೊತೆಗೆ ಸಂಸ್ಕೃತಿಯನ್ನೂ ಕಲಿಸಬೇಕು. ತಿಳಿದವರು ಆ ವಿದ್ಯೆಯನ್ನು ಸಮಾಜದಲ್ಲಿ ಪಸರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್.ಜಿ, ದ್ವಾರಕಾ ಸಮೂಹ ಸಂಸ್ಥೆಗಳ ನಿರ್ದೇಶಕ ಅಮೃತಕೃಷ್ಣಎನ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ, ಕಾಲೇಜಿನ ಸಂಸ್ಕೃತಿ ಹಾಗೂ ಲಲಿತಕಲೆಗಳ ಸಂಯೋಜಕಿ ಡಾ. ವಿದ್ಯಾ ಎಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ಜೆ. ಎಂ.ಸಿ ವಿದ್ಯಾರ್ಥಿನಿ ಶೈನಿತಾ ಸ್ವಾಗತಿಸಿ, ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನೆಯ ನಂತರ ಸಾಹಿತಿ ಮತ್ತು ಯಕ್ಷಗಾನ ವಿದ್ವಾಂಸ ಡಾ|ರಮಾನಂದ ಬನಾರಿ, ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥಡಾ. ಶ್ರೀಶಕುಮಾರ ಎಂ.ಕೆ., ನರಿಮೊಗರು ಸರಸ್ವತಿ ವಿದ್ಯಾಮಂದಿರ ಅಧ್ಯಕ್ಷ ಅವಿನಾಶ ಕೊಡಂಕಿರಿ ಅವರುಗಳಿಂದ ಸಂವಾದ ಕಾರ್ಯಕ್ರಮ ನಡೆಯಿತು. ರಾಮಕುಂಜ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಗಣರಾಜ ಕುಂಬ್ಳೆ ಸಮನ್ವಯಕಾರರಾಗಿ ಭಾಗವಹಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ