ಮಂಗಳೂರು: ಹಿರಿಯ ಸಾಹಿತಿ ನಾ. ಡಿ'ಸೋಜ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದೆ. ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಈ ಕುರಿತು ಬಿಡುಗಡೆ ಮಾಡಿರುವ ಸಂದೇಶದಲ್ಲಿ ನಾ. ಡಿಸೋಜ ಅವರು ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಉತ್ಕೃಷ್ಟ ಕೊಡುಗೆಯನ್ನು ಸ್ಮರಿಸಿದ್ದಾರೆ.
ರಜತ ಕಮಲ, ಸ್ವರ್ಣ ಕಮಲ ಪ್ರಶಸ್ತಿ ಪುರಸ್ಕೃತರು, ಮಕ್ಕಳ ಸಾಹಿತ್ಯ, ಸಂಶೋಧನೆ, ಕಾದಂಬರಿ, ರಂಗಭೂಮಿ ಮೊದಲಾದ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸಾಧನೆಯನ್ನು ಮಾಡಿರುವ ಇವರು ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದರು. ಸಾಹಿತ್ಯಕ್ಕೆ ಶ್ರೇಷ್ಠ ಕೊಡುಗೆ ನೀಡುವುದರ ಮೂಲಕ ಜನ ಮಾನಸದಲ್ಲಿ ಚಿರ ಸ್ಥಾಯಿಯಾಗಿದ್ದಾರೆ.
ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ