ಜಿಲ್ಲಾ ಸಮ್ಮೇಳನದ ಯಶಸ್ಸಿಗೆ ಸರ್ವರೂ ಸಹಕರಿಸಿ: ಡಾ. ಎಂ.ಪಿ. ಶ್ರೀನಾಥ ಮನವಿ

Chandrashekhara Kulamarva
0


ಮಂಗಳೂರು: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆಯು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಉಜಿರೆಯವರು ವಹಿಸಿದ್ದರು. ಇದೇ ಬರುವ ಫೆಬ್ರವರಿ 21ಮತ್ತು 22 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯುವ 27 ನೆಯ ಜಿಲ್ಲಾ ಸಾಹಿತ್ಯ ಸಮ್ಮೇಳನ  ಸರ್ವರ ಸಹಕಾರದ ಅಗತ್ಯದ ಕುರಿತು ಸಭೆಗೆ ಮಾಹಿತಿ ತಿಳಿಸಿದರು.


ಗೌರವ ಕೋಶಾಧ್ಯಕ್ಷ ಐತಪ್ಪ ನಾಯ್ಕ್, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ. ಯು. ಏಚ್ ಖಾಲಿದ್, ಉಳ್ಳಾಲ ತಾಲೂಕು ಅಧ್ಯಕ್ಷ ಧನಂಜಯ ಕುಂಬ್ಳೆ, ಕಡಬ ತಾಲೂಕು ಅಧ್ಯಕ್ಷ ಕೆ ಸೇಸಪ್ಪ ರೈ, ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ಎಸ್ ರೇವಣಕರ್, ಬಂಟ್ವಾಳ ತಾಲೂಕು ವಿಶ್ವನಾಥ   ಬಂಟ್ವಾಳ, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಯದುಪತಿ ಗೌಡ, ಮೂಡಬಿದ್ರಿ ತಾಲೂಕು ಅಧ್ಯಕ್ಷ ವೇಣುಗೋಪಾಲ್, ಮೂಲ್ಕಿ ತಾಲೂಕು ಅಧ್ಯಕ್ಷ ಮಿಥುನ ಉಡುಪ, ಜಿಲ್ಲಾ ಸಮಿತಿ ಸದಸ್ಯರುಗಳಾದ ಸುಂದರ ನಾಯ್ಕ್, ರಾಮಚಂದ್ರ ಪಲ್ಲತಡ್ಕ, ಸನತ್ ಕುಮಾರ್ ಜೈನ್, ಶ್ರೀಮತಿ ಅರುಣಾ ನಾಗರಾಜ್ ಸಭೆಯಲ್ಲಿ ಉಪಸ್ಥಿತರಿದ್ದರು.


ದ.ಕ.ಜಿಲ್ಲಾ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಎಚ್ ಸ್ವಾಗತಿಸಿದರೆ, ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ. ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top