ಮಂಗಳೂರು: ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಮಲಾಕ್ಷ ಆಚಾರ್ಯ ಅವರು ಭರತ ನಾಟ್ಯ ತರಗತಿಯನ್ನು ನಡೆಸಿ ಹಲವು ಮಂದಿ ಶಿಷ್ಯ ವರ್ಗವನ್ನು ಹೊಂದಿದ್ದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಂದ ಪುರಸ್ಕೃತರಾದ ಇವರು ಜನ ಮಾನಸದಲ್ಲಿ ಚಿರ ಸ್ಥಾಯಿಯಾಗಿದ್ದಾರೆ.
ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತನ್ನ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ