ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಜನವರಿ 26 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ನಗರದ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ ಹೊರಾಂಗಣದ ಆವರಣದಲ್ಲಿ ಭಾರತದ ಧ್ವಜಾರೋಹಣದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಗುವುದು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಸಾರ್ವಜನಿಕರು ಸೇರಿದಂತೆ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು, ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಭಾರತದ ಅಭಿಮಾನದೊಂದಿಗೆ ಈ ಗಣರಾಜ್ಯೋತ್ಸವ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ. ವಿನಂತಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ