ದಾವಣಗೆರೆ: ಕಲಾಕುಂಚದಿಂದ ಜಿಲ್ಲಾ ಕಸಾಪ ಅಧ್ಯಕ್ಷರಿಗೆ ಅಮೃತ ಮಹೋತ್ಸವ ಸನ್ಮಾನ

Upayuktha
0




ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪನವರ ಜನಮದಿನದ 75ನೇ ವರ್ಷದ ಅಮೃತ  ಮಹೋತ್ಸವವನ್ನು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸರ್ವ ಪದಾಧಿಕಾರಿಗಳು, ಮಂಗಳವಾರ (ಜ.21) ನಗರದ ಕುವೆಂಪು ಕನ್ನಡ ಭವನದ ಕಛೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಲಾಕುಂಚದ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ ಶೆಣೈ, ಅಧ್ಯಕ್ಷ ಕೆ.ಹೆಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಕಲಾಕುಂಚ ಸಿದ್ಧವೀರಪ್ಪ ಬಡಾವಣೆ ಶಾಖೆಯ ಅಧ್ಯಕ್ಷ ಲಲಿತಾ ಕಲ್ಲೇಶ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕಿ ಜ್ಯೋತಿ ಗಣೇಶ್‌ಶೆಣೈ, ಗೌರವ ಅಧ್ಯಕ್ಷೆ ವಸಂತಿ ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ ದಂಪತಿಯವರು ಸಮಿತಿ ಸದಸ್ಯರಾದ ಕುಸುಮಾ ಲೋಕೇಶ್, ಚನ್ನಗಿರಿ ಭರತ್, ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ, ಶೈಲಾ ವಿಜಯಕುಮಾರಶೆಟ್ಟಿ ದಂಪತಿಗಳು, ಮಂಜುಳಾ ಸುನೀಲ್, ಲಕ್ಷ್ಮಿ ಸುರೇಶ್, ಎಸ್.ಶಿವನಪ್ಪ ಶಿವರುದ್ರಮ್ಮ ಮುಂತಾದವರು ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ. ವಾಮದೇವಪ್ಪನವರು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ಶೆಣೈ, ಕಲಾಕುಂಚದ ಅಧ್ಯಕ್ಷ ಕೆ.ಹೆಚ್.ಮಂಜುನಾಥ್‌ರವರಿಗೆ ಸನ್ಮಾನಿಸಿ ಗೌರವಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top