ಫೆ.1: ಕಲಾಕುಂಚ ಮಹಿಳಾ ವಿಭಾಗದ ಸರ್ವ ಸದಸ್ಯರ ಸಾಮಾನ್ಯ ಸಭೆ

Upayuktha
0



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕಲಾಕುಂಚ ಮಹಿಳಾ ವಿಭಾಗದ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆಬ್ರವರಿ 1 ರಂದು ಶನಿವಾರ ಸಂಜೆ 4 ಗಂಟೆಗೆ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಸರ್ವ ಸದಸ್ಯರ ಮಹಾಸಭೆಯನ್ನು ಕರೆಯಲಾಗಿದೆ.


ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈಯವರ ಅಧ್ಯಕ್ಷತೆಯಲಿ ನಡೆಯುವ ಈ ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ, ಅನುಮೋದನೆ ವಾರ್ಷಿಕ ವರದಿ, ಮುಂದಿನ  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ಕುರಿತು ವಿಚಾರ, ವಿನಿಮಯ, ಚರ್ಚೆ ನಡೆಯಲಿದೆ.


ಕಲಾಕುಂಚ ಸರ್ವ ಸದಸ್ಯರು, ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹತ್ವಪೂರ್ಣ ಸಭಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ವಸಂತಿ ಮಂಜುನಾಥ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9538732777 ಈ ಸಹಾಯವಾಣಿಗೆ ಸಂಪರ್ಕಿಸಬಹುದು.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top