“ಭಾವನೆಗಳ ಸುಳಿಯಲ್ಲಿ” ಕವನ ಸಂಕಲನ ಲೋಕಾರ್ಪಣೆ ಮತ್ತು ಕವಿಗೋಷ್ಠಿ
ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ 35ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜನವರಿ 12 ರಂದು ಭಾನುವಾರ ನಗರದ ಕೆ.ಬಿ.ಬಡಾವಣೆಯ ಕುವೆಂಪು ರಸ್ತೆ (ಲಾಯರ್ ರೋಡ್)ಯ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚದ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈಯವರು ತಿಳಿಸಿದ್ದಾರೆ.
ಮಕರ ಸಂಕ್ರಮಣದ ಪ್ರಯುಕ್ತ ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಕವಿಗೋಷ್ಠಿ ಇದ್ದು ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆಯ ದೃಶ್ಯಕಲಾ ವಿಶ್ವವಿದ್ಯಾಲಯದ ಪ್ರಾಚಾರ್ಯ ಡಾ. ಜೈರಾಜ್ ಚಿಕ್ಕಪಾಟೀಲ್ ನೆರವೇರಿಸಲಿದ್ದಾರೆ. ಕಲಾಕುಂಚದ ಅಧ್ಯಕ್ಷ ಕೆ.ಹೆಚ್. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ.
ಯುವ ಕವಿ ಹಾಗೂ “ಭಾವನೆಗಳ ಸುಳಿಯಲ್ಲಿ” ಕವನ ಸಂಕಲನ ಕರ್ತೃ ದರ್ಶನ ಸಂಕೋಳ್‌ರವರ ಈ ಕವನ ಸಂಕಲನವನ್ನು ಚಿತ್ರದುರ್ಗದ ಸಾಹಿತಿ ಟಿ.ಪಿ. ಉಮೇಶ್‌ರವರು ಲೋಕಾರ್ಪಣೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸೌಹಾರ್ದ ಪ್ರಕಾಶನದ ಪ್ರಕಾಶಕಿ ಹಿರಿಯ ಸಾಹಿತಿ ಎ.ಸಿ.ಶಶಿಕಲಾ ಶಂಕರಮೂರ್ತಿ ಆಗಮಿಸಲಿದ್ದಾರೆ. ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾ ಶಾಂತಪ್ಪ ಪೂಜಾರಿ ಗೌರವ ಉಪಸ್ಥಿತರಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ