ಉಜಿರೆ: ಜ.6ರಂದು ಜಿಲ್ಲಾಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಪರ್ವ

Upayuktha
0


ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಪರ್ವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ಇಂದು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಇಂದ್ರಪ್ರಸ್ಥ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ  ನಡೆಯುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.


ಸೋಮವಾರ ಪೂರ್ವಾಹ್ನ ಗಂಟೆ 9:30ಕ್ಕೆ ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ 9 ಸಾಂಸ್ಕೃತಿಕ ಪರ್ವ ಉದ್ಘಾಟಿಸುವರು. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಶುಭಾಶಂಸನೆ ಮಾಡುವರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ಸಂಯೋಜಕರಾದ ಎಸ್.ಡಿ.ಎಂ. ಕಾಲೇಜಿನ ಗಾನವಿ ಡಿ. ಮತ್ತು ಪ್ರಸಾದ್‌ಕುಮಾರ್ ತಿಳಿಸಿದ್ದಾರೆ.


ಉಜಿರೆಯಲ್ಲಿ ನಾಳೆಯಿಂದ ನಾಟಕೋತ್ಸವ 

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಸಾಂಸ್ಕೃತಿಕ ಸಂಘಟನೆ “ಸಮೂಹ, ಉಜಿರೆ” ಆಶ್ರಯದಲ್ಲಿ ಉಜಿರೆಯಲ್ಲಿ ರುವ “ವನರಂಗ” ಬಯಲು ರಂಗಮಂದಿರದಲ್ಲಿ ಇದೇ 7, 8 ಮತ್ತು 9 ರಂದು ಪ್ರತಿ ದಿನ ಸಂಜೆ ಗಂಟೆ 6:30 ರಿಂದ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.


ಜ. 7 ಮಂಗಳವಾರ: ಮುದ್ದಣ ಮನೋರಮೆ (ಧರ್ಮಸ್ಥಳದ ಸಿಬ್ಬಂದಿ ಅವರಿಂದ), ಜ. 8 ಬುಧವಾರ: ಚಾರುವಸಂತ (ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಂಗ ಅಧ್ಯಯನ ಕೇಂದ್ರದ ಕಲಾವಿದರಿಂದ), ಜ. 9 ಗುರುವಾರ: ಭೀಷ್ಮಾಸ್ತಮಾನ (ಎಸ್.ಡಿ.ಎಂ. ರಂಗ ತರಬೇತಿ ಕೇಂದ್ರದ ಕಲಾವಿದರಿಂದ).


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top