ಉಡುಪಿ: ಎಂಜಿಎಂ ಕಾಲೇಜಿನಲ್ಲಿ ಆರ್ಹ ಬಡ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಚಿತ ಭೇೂಜನ ವ್ಯವಸ್ಥೆಗೆ ಸ್ಥಾಪಿಸಲ್ಪಟ್ಟ ಭೇೂಜನ ನಿಧಿಗೆ ಎಂಜಿಎಂ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಕಾರವಾರದ ಜಿಲ್ಲಾ ನೋಂದಣಿ ಅಧಿಕಾರಿ ಕೀರ್ತಿಕುಮಾರಿ ಇವರು ಪ್ರತಿ ವರುಷದಂತೆ ಈ ವರ್ಷವೂ 25,000 ರೂ.ಗಳನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತರಿಗೆ ಹಸ್ತಾಂತರಿಸಿದರು.
ಕಾಲೇಜಿನ ವಿಶ್ವಸ್ತ ಮಂಡಳಿಯ ಅಧ್ಯಕ್ಷ ಟಿ.ಸತೀಶ್ ಯು.ಪೈ ಯವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ್ ಕಾರ್ಯದರ್ಶಿ ಸಿಎ ಬಿ.ಪಿ ವರದರಾಯ ಪೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ.ಕೊಕ್ಕಣೆ೯ ಸುರೇಂದ್ರ ನಾಥ ಶೆಟ್ಟಿ, ಟಿಎಂಎ ಪೈ ಕೌಶಲ್ಯಾಭಿವೃದ್ದಿ ಕೇಂದ್ರದ ನಿರ್ದೇಶಕ ಟಿ.ರಂಗ ಪೈ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ದೇವಿದಾಸ್ ನಾಯ್ಕ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಡಾ.ಎಂ.ವಿಶ್ವನಾಥ ಪೈ, ಕೇೂಶಾಧಿಕಾರಿ ದೀಪಾಲಿ ಕಾಮತ್ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ