ಡಾ‌. ಶ್ರೀಧರ ಹೆಚ್.ಜಿ ಅವರ ಚಪಡ ಕಾದಂಬರಿಗೆ ಅತ್ಯುತ್ತಮ ಕೃತಿ ಪ್ರಶಸ್ತಿ

Upayuktha
0

ಪುತ್ತೂರು: ಕೊಪ್ಪಳದ ಶಿವಶಾಂತ ಮಂಗಳ ಭವನದಲ್ಲಿ ನಡೆದ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ  ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ ಶ್ರೀಧರ ಎಚ್ ಜಿ ಇವರು ಬರೆದ ಚಪಡ ಕಾದಂಬರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್ ಮುಕುಂದ ರಾಜ್. ಹಿರಿಯ ಸಾಹಿತಿ ಪ್ರೊ ಅಲ್ಲಮಪ್ರಭು ಬೆಟ್ಟದೂರು. ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ ಎನ್ ಮುಂತಾದವರು ಉಪಸ್ಥಿತರಿದ್ದರು.


ಡಾ. ಶ್ರೀಧರ ಎಚ್.ಜಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡು ನಿವೃತ್ತರಾಗಿದ್ದು ಪ್ರಸ್ತುತ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಗೈದಿದ್ದು ಹಲವಾರು ನಾಟಕ, ವಿಮರ್ಶೆ, ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ 'ಮಲ್ಲೇಪುರಂ ಪ್ರಶಸ್ತಿ', 'ಸಹೃದಯ ಪ್ರಾಧ್ಯಾಪಕ' ಪ್ರಶಸ್ತಿ,' ಚಡಗ ಕಾದಂಬರಿ' ವಸುದೇವ ಭೂಪಾಲಂ ಪ್ರಶಸ್ತಿಗಳೂ ಲಭಿಸಿದೆ.


ಅಂತೆಯೇ ಇವರ ಚಪಡ ಕೃತಿಯು ಕರ್ನಾಟಕ ಸಾಹಿತ್ಯ ಅಕಾಡೆಮಿಯ 2021 ನೇ ಸಾಲಿನ ಕಾದಂಬರಿ ಪ್ರಕಾರದಲ್ಲಿ 'ಅತ್ಯುತ್ತಮ ಕೃತಿ' ಎನ್ನುವ    ಪ್ರಶಸ್ತಿಗೆ ಆಯ್ಕೆಯಾಗಿರುವ ಬಗೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಬಂಧುಗಳು ಶುಭಾಶಯ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top