ಫೆ.4: ಸವಿತಾ ಮಹರ್ಷಿ ಜಯಂತಿ

Upayuktha
0


 

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ಫೆಬ್ರವರಿ 4 ರಂದು ಬೆಳಗ್ಗೆ 10 ಗಂಟೆಗೆ ನಗರದ ಅಂಬಲಪಾಡಿಯ ಜಿಲ್ಲಾ ಸವಿತಾ ಸಮಾಜ ಸಮುದಾಯದ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲಿಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ನಿಂಜೂರು ವಿಶ್ವನಾಥ ಭಂಡಾರಿ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಜಿಲ್ಲಾ ಸವಿತಾ ಸಮಾಜದ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲ್ ಉಪನ್ಯಾಸ ನೀಡಲಿದ್ದಾರೆ.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top