ಮಂಗಳೂರು: ಭಾನುವಾರ ತಡರಾತ್ರಿ ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಕ್ಕಪಕ್ಕ ವ್ಯಾಪಿಸಿಕೊಳ್ಳುವ ಆತಂಕದ ಬಗ್ಗೆ ಸ್ಥಳೀಯರಿಂದ ಮಾಹಿತಿ ಸಿಕ್ಕಿದ ಕೆಲವೇ ಕ್ಷಣಗಳಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಸ್ಥಳಕ್ಕೆ ಆಗಮಿಸಿದ್ದರು.
ಅವಘಡದ ಸ್ಥಳಕ್ಕೆ ತಲುಪುವ ಮೊದಲೇ ಪಾಂಡೇಶ್ವರ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದ್ದ ಶಾಸಕರು, ಅಗ್ನಿಶಾಮಕ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದ ಮೇಲೆ ಅಪಾರ ಪ್ರಮಾಣದ ಸೊತ್ತುಗಳಿಗೆ ನಷ್ಟವುಂಟಾಗಿದ್ದರೂ, ಯಾವುದೇ ಪ್ರಾಣಾಪಾಯವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವವರೆಗೆ ಸ್ಥಳದಲ್ಲಿದ್ದರು.
ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರುಗಳಾದ ವೀಣಾಮಂಗಳ, ಭರತ್ ಕುಮಾರ್, ಶೈಲೇಶ್ ಶೆಟ್ಟಿ ಯವರ ಸಹಿತ ಅನೇಕ ಬಿಜೆಪಿ ಕಾರ್ಯಕರ್ತರು, ಸ್ಥಳೀಯರು ಕಾರ್ಯಾಚರಣೆಗೆ ಸಹಕರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ