ಬೆಳ್ಳರ್ಪಾಡಿ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀಮನ್ಮಹಾರಥೋತ್ಸವ ಸಂಪನ್ನ

Upayuktha
0


ಹಿರಿಯಡ್ಕ: ಬೆಳ್ಳರ್ಪಾಡಿ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಜ. 16ರಂದು ಕೊರಂಗ್ರಪಾಡಿ ಜೋತಿರ್ವಿದ್ವಾನ್‌ ಕೆ.ಪಿ. ಕುಮಾರಗುರು ತಂತ್ರಿ ಹಾಗೂ ಅರ್ಚಕ ರಾಮಮೂರ್ತಿ ಭಟ್‌ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.


ಬೆಳಗ್ಗೆ  ಪ್ರಧಾನ ಹೋಮ, ಕಲಶಾಭಿಷೇಕ, ನ್ಯಾಸಪೂಜೆ, ರಥದಿವಸ, ಮಹಾಪೂಜೆ, ರಥಸಂಪ್ರೋಕ್ಷಣೆ, ವಸಂತಪೂಜೆ, ಅಷ್ಟಾಂಗುಲ, ರಥಧ್ಯಾನ, ಉತ್ಸವ ಬಲಿ, ಶ್ರೀ ಮನ್ಮಾಹ  ರಥೋತ್ಸವ, ದರ್ಶನಬಲಿ, ತಟಾಕೋತ್ಸವ, ವಾಲಗಮಂಟಪ ಪೂಜೆ, ಅಷ್ಟಾವಧಾನಸೇವೆ, ಶ್ರೀ ಭೂತಬಲಿ, ಶಯನೋಲಗ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು. 


ಮಧ್ಯಾಹ್ನ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು. ರಾತ್ರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ದೇವರ ಶ್ರೀಮನ್ಮಹಾರಥೋತ್ಸವ ವಿಜೃಂಭಣೆಯಿಂದ ನೆರವೇರಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಿ. ಭುಜಂಗ ಶೆಟ್ಟಿ, ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶಿವರಾಮ ಶೆಟ್ಟಿ, ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜೇತ್‌ ಕುಮಾರ್‌, ಸದಸ್ಯರಾದ ಲಕ್ಷ್ಮೀ ನಾರಾಯಣ ಭಟ್‌, ರೋಹಿತ್‌ ಶೆಟ್ಟಿ, ಗ್ರಾಮಸ್ಥರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top