ಗೃಹರಕ್ಷಕಿ ಜಯಂತಿ ಇವರಿಗೆ ಸಮಾದೇಷ್ಟರಿಂದ ಸನ್ಮಾನ

Upayuktha
0




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್ ಇಲ್ಲಿ ಮಂಗಳೂರು ಘಟಕದ ಗೃಹರಕ್ಷಕಿ  ಜಯಂತಿ ಇವರನ್ನು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಇವರು ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿದರು.


ಜಯಂತಿ ಅವರು 2018ರ ಅ.16ರಂದು ಗೃಹರಕ್ಷಕ ದಳಕ್ಕೆ ಸೇರ್ಪಡೆಯಾಗಿ ಸುಮಾರು 6 ವರ್ಷಗಳಿಂದ ನಿಷ್ಕಾಮ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದೊಂದಿಗೆ ಗೃಹರಕ್ಷಕ ಇಲಾಖೆಗೆ ಸೇರಿದ ಬಳಿಕ ಹಬ್ಬ ಹರಿದಿನಗಳಲ್ಲಿ ಕಾನೂನು ಪಾಲನೆ, ಚುನಾವಣೆ ಬಂದೋಬಸ್ತ್ ಕರ್ತವ್ಯ ಮುಂತಾದವುಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.


ಸನ್ಮಾನ ಸ್ವೀಕರಿಸಿ ಮಾತನಾಡಿದ ಜಯಂತಿ ಅವರು ಸಮಾದೇಷ್ಟರಿಗೆ ಹಾಗೂ ಗೃಹರಕ್ಷಕರಿಗೆ ಧನ್ಯವಾದ ತಿಳಿಸಿದರು. ಡಾ. ಮುರಲೀ ಮೋಹನ ಚೂಂತಾರು ಅವರು ಮಾತನಾಡಿ, ಇಲಾಖೆಯ ಘನತೆ ಗೌರವವನ್ನು ಎತ್ತಿ ಹಿಡಿಯಿರಿ ಹಾಗೂ ಉತ್ತಮ ಕರ್ತವ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕ ದಳ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ಮೂಡಬಿದ್ರಿ ಘಟಕದ ಪ್ರಭಾರ ಘಟಕಾಧಿಕಾರಿ  ಚಂದ್ರಶೇಖರ್, ಉಳ್ಳಾಲ ಘಟಕದ ಗೃಹರಕ್ಷಕ ಸಂತೋಷ್, ಸಂಜಯ್ ಶೆಣೈ, ಸುಲೋಚನಾ, ಖತೀಜಮ್ಮ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top