ಮಂಗಳೂರು: ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ ವತಿಯಿಂದ ಅಮೃತ ಮಹೋತ್ಸವ ಸಂಭ್ರಮಾಚರಣೆ, ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟ-2025 ಉದ್ಘಾಟನೆ ಹಾಗೂ ಅಮೃತ ಮಹೋತ್ಸವ ಸಭಾ ಭವನದ ಶಿಲಾನ್ಯಾಸ ಕಾರ್ಯಕ್ರಮ ಜ.7ರಂದು ಬೆಳಗ್ಗೆ 10 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಕ್ರೀಡಾ ಧ್ವಜಾರೋಹಣ ಮಾಡಲಿದ್ದಾರೆ.
ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಉಪಸ್ಥಿತರಿದ್ದು, ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭೆ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಮಂಗಳೂರು ಉತ್ತರದ ಶಾಸಕ ಡಾ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕರಾದ ರಾಜೇಶ್ ನಾಯಕ್ (ಬಂಟ್ವಾಳ), ಉಮಾನಾಥ ಕೋಟ್ಯಾನ್ (ಮೂಡುಬಿದಿರೆ), ಅಶೋಕ್ ಕುಮಾರ್ ರೈ (ಪುತ್ತೂರು), ಭಾಗೀರಥಿ ಮುರುಳ್ಯ (ಸುಳ್ಯ), ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಐವನ್ ಡಿಸೋಜ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಕುಮಾರ್, ,ಮನಪಾ ಮೇಯರ್ ಮನೋಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ