ಕಂಗನಾ ರಣಾವತ್ ಇಂದಿರಾ ಗಾಂಧಿಯಾಗಿ ರೂಪಾಂತರಗೊಳ್ಳುವುದನ್ನು ನೋಡಿ. ಇದು ಈಗಾಗಲೇ ಪ್ರಾಸ್ಥೆಟಿಕ್ಸ್ ಮತ್ತು ಮೇಕಪ್‌ಗಾಗಿ ಅಕಾಡೆಮಿ ಪ್ರಶಸ್ತಿ ವಿಜೇತ ಡೆನ್ನಿಸ್ ಮಾಲಿನೋವ್‌ಸ್ಕಿಯವರ ಪ್ರತಿಭೆಯೊಂದಿಗೆ ವ್ಯಾಪಕ ಪ್ರಶಂಸೆಯನ್ನು ಗಳಿಸಿದೆ. ಎಮರ್ಜೆನ್ಸಿ ಚಲನಚಿತ್ರವು ಜನವರಿ 17ರಂದು ಬಿಡುಗಡೆಯಾಗಲಿದೆ.
ಕಂಗನಾ ರಣಾವತ್ ನಿರ್ದೇಶಿಸಿ, ನಟಿಸಿರುವ, ‘ಎಮರ್ಜೆನ್ಸಿ’ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ಇದು ಅನೇಕರಿಗೆ ಇಷ್ಟ ಆಗಿದೆ. ಪ್ರಿಯಾಂಕಾ ಗಾಂಧಿ ಕೂಡ ಈ ಟ್ರೇಲರ್ನ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಪಕ್ಕಾ ರಾಜಕೀಯದ ಕಥೆಯನ್ನು ಆಧರಿಸಿದೆ. ಚಿತ್ರವನ್ನು ಬಿಡುಗಡೆ ಮಾಡಲು ಕಂಗನಾ ಸಾಕಷ್ಟು ಸಂಕಷ್ಟ ಎದುರಿಸಬೇಕಾಯಿತು. ಹೀಗಾಗಿ ಮುಂದಿನ ದಿನಗಳಲ್ಲಿ ರಾಜಕೀಯದ ಬಗ್ಗೆ ಕಥೆ ಮಾಡದಿರಲು ನಿರ್ಧರಿಸಿದ್ದಾರೆ.
‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯವರು ತಕರಾರು ತೆಗೆದರು. ಸೆನ್ಸಾರ್ ಪ್ರಮಾಣಪತ್ರ ನೀಡಲು ಸಾಕಷ್ಟು ಸತಾಯಿಸಿದರು. ಅತ್ತ ಪಂಜಾಬಿನ ಶಿರೋಮಣಿ ಅಕಾಲಿ ದಳದವರು ಕೂಡ ಈ ಚಿತ್ರದ ಬಗ್ಗೆ ವಿರೋಧ ವ್ಯಕ್ತಪಡಿಸಿದರು. ಸಿಖ್ ಸಮುದಾಯಕ್ಕೆ ಚಿತ್ರದಿಂದ ಅವಮಾನ ಆಗಿದೆ ಎಂದು ಆರೋಪಿಸಿದರು.
ಕಂಗನಾ ರಣಾವತ್ ಅವರು ಈಗ ಸಂಸದೆ ಆಗಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರವಾಗಿ ನಿಂತು ಗೆಲುವು ಕಂಡಿದ್ದಾರೆ. ರಾಜಕೀಯದಲ್ಲಿ ಯಶಸ್ಸು ಕಂಡರೆ ಸಿನಿಮಾ ರಂಗ ಬಿಡುವುದಾಗಿ ಹೇಳಿದ್ದರು. ಅದು ನಿಜವಾಗುವುದೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯ ಕಂಗನಾ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ