ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ನಾಳೆ (ಜ.2) ಸಂಜೆ 5:30ರಿಂದ ಧರ್ಮ ಸಮ್ಮೇಳನ ಸಭಾ ಕಾರ್ಯಕ್ರಮ ಜರುಗಲಿದ್ದು ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 6:30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.
ಅದೇ ರೀತಿ ಜನವರಿ 5ರವರೆಗೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ