ಗರ್ಭಿಣಿ ಹಸುವಿನ ಹತ್ಯೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Upayuktha
0




ಕುಮಟಾ: ಹೊನ್ನಾವರ ಗರ್ಭ ಧರಿಸಿದ್ದ ಗೋ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಪಂಚನಾಮೆಗೆ‌ ಕರೆದುಕೊಂಡು ಹೋಗಿದ್ದಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ ಘಟನೆ ಹೊನ್ನಾವರದಲ್ಲಿ ನಡೆದಿದೆ.


ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಕೊಂಡಾಕುಳಿಯಲ್ಲಿ ಗರ್ಭ ಧರಿಸಿದ್ದ ಗೋ ವಧೆ ಮಾಡಿದ ಆರೋಪದಡಿ ಹೊನ್ನಾವರ ತಾಲೂಕಿನ ವಲ್ಕಿಯ ತೌಫಿಕ್ ಅಹಮ್ಮದ್ ಜಿದ್ದಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಕರೆದುಕೊಂಡು ಹೋದಾಗ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ, ತಪ್ಪಿಸಿಕೊಂಡು ಪರಾರಿಯಾಗಿದ್ದ. ಈ ವೇಳೆ‌ ಆರೋಪಿ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.


ಈ ಬಗ್ಗೆ ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ, ಜ.25 ರಂದು ಹೊನ್ನಾವರ ಪೊಲೀಸರು ಹೊನ್ನಾವರ ತಾಲೂಕಿನ ದುಗ್ಗುರು ರಸ್ತೆ ಹತ್ತಿರ ಆರೋಪಿತ ಫೈಜಾನ್​ನಿಂದ ಆಯುಧ ಜಪ್ತಿಗಾಗಿ ಪಂಚನಾಮೆ ಜರುಗಿಸಲು ಕರೆದುಕೊಂಡು ಹೋದ ಸಂದರ್ಭದಲ್ಲಿ ಪಿಐ ಸಿದ್ಧರಾಮೇಶ್ವರ ಮತ್ತು ಪಿಎಸ್ಐ ರಾಜಶೇಖರ ವಂದಲಿ ಸೇರಿದಂತೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಳಿಕ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top