ಜಾರ್ಜ್ ಫೆರ್ನಾಂಡಿಸ್ ಬದುಕು ದೇಶಕ್ಕೆ ಸದಾ ಆದರ್ಶ: ಡಾ. ನಾರಾಯಣ ಶೆಣೈ
ಮಂಗಳೂರು: ದೇಶ ಕಂಡ ಅಪ್ರತಿಮ ರಾಜಕಾರಣಿ ಜಾರ್ಜ್ ಫೆರ್ನಾಂಡಿಸ್ ಅವರು ಅಸಂಘಟಿತ ಕಾರ್ಮಿಕರಿಗೆ ಶಕ್ತಿ ತುಂಬಿದ ಮಹಾನ್ ಚೇತನ. ರಾಜಕೀಯವಾಗಿ ಉನ್ನತ ಸ್ಥಾನದಲ್ಲಿದ್ದರೂ ಜನ ಸಾಮಾನ್ಯರಂತೆ ಬದುಕಿದ ಜಾರ್ಜ್ ಅವರ ಜೀವನಾದರ್ಶ ದೇಶಕ್ಕೆ ಮಾದರಿಯಾಗಿದೆ ಎಂದು ಎಂಐಟಿ ಮಣಿಪಾಲದ ನಿವೃತ್ತ ಪ್ರಾಧ್ಯಾಪಕ ಡಾ.ಕೆ. ನಾರಾಯಣ ಶೆಣೈ ಹೇಳಿದರು.
ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ ದಿ.ಜಾರ್ಜ್ ಫೆರ್ನಾಂಡಿಸ್ ಅವರ 6ನೇ ಪುಣ್ಯಸ್ಮರಣೆ ಅಂಗವಾಗಿ ಬುಧವಾರ ನಗರದ ಮಂಗಳಾ ಕ್ರೀಡಾಂಗಣದ ಬಳಿ ನಡೆದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂದ್ಯಾಟಕ್ಕೆ ಚಾಲನೆ ನೀಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಮಾತನಾಡಿ "ಕೊಂಕಣ ರೈಲ್ವೆ ಯೋಜನೆ ಮೂಲಕ ಜಾರ್ಜ್ ಫೆರ್ನಾಂಡಿಸ್ ಅವರು ಕರಾವಳಿ ಕರ್ನಾಟಕದ ಅಭಿವೃದ್ದಿಗೆ ಮಹತ್ವದ ಕೊಡುಗೆ ನೀಡಿದ್ದಾರೆ" ಎಂದರು.
ಭೆಥನಿ ಮಂಗಳೂರು ಪ್ರಾಂತ್ಯದ ಸಹ ಪ್ರಾಂತ್ಯಾಧಿಕಾರಿ ಭಗಿನಿ ಮಾರಿಯೊಲ ಡಿಸೋಜಾ ಬಿ.ಎಸ್. ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ, ಐಎಂಎ ಮಂಗಳೂರು ಶಾಖೆಯ ಅಧ್ಯಕ್ಷೆ ಡಾ. ಜೆಸ್ಸಿ ಮರಿಯ ಡಿಸೋಜ, ಉದ್ಯಮಿ ಮ್ಯಾಕ್ಸಿಂ ಕ್ರಾಸ್ತಾ, ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಜ್ಞಾನದೀವಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು. ವೇದಿಕೆಯ ಸ್ಥಾಪಕ ಅಧ್ಯಕ್ಷ ಫ್ರಾಂಕ್ಲಿನ್ ಮೊಂತೆರೊ ಸ್ವಾಗತಿಸಿದರು. ಮಲ್ಲಿಕಟ್ಟೆ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರುತ್ ಸಿಲ್ವಿಯಾ ಕ್ಯಾಸ್ತಲಿನೊ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ