ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಬಿ.ಸಿ.ರೋಡ್-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿ ಪರಿಶೀಲನೆ

Upayuktha
0


ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಗುರುವಾರ ಬಿ.ಸಿ ರೋಡ್‌ನಿಂದ ಉಪ್ಪಿನಂಗಡಿ ಅಡ್ಡಹೊಳೆ ವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಲದೆ ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿರುವ ಕೆಎನ್ಆರ್ ಕಂಪನಿಯ ಅಧಿಕಾರಿಗಳ ಜತೆ ಸಭೆ ನಡೆಸಿ ಕಾಮಗಾರಿಗಳನ್ನು ಅತಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.


ಇದೇ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿಯಿಂದ ತೊಂದರೆಗೆ ಒಳಗಾಗಿರುವ ಹಲವು ಮಂದಿ ನಾಗರಿಕರು, ಕುಟುಂಬಗಳು, ವ್ಯಾಪಾರಿಗಳಿಂದ ಖುದ್ದು ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿದರು.


ಮಂಗಳೂರು-ಬೆಂಗಳೂರು ನಡುವಿನ ಅತ್ಯಂತ ಮಹತ್ವದ ರಾಷ್ಟ್ರೀಯ ಹೆದ್ದಾರಿಯಾಗಿರುವ ಕಾರಣ ಚತುಷ್ಪಥ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಿದೆ. ಒಟ್ಟಾರೆ 48 ಕಿ.ಮೀ ಉದ್ದದ (ಬಿ.ಸಿ ರೋಡ್‌ನಿಂದ ಅಡ್ಡಹೊಳೆ ತನಕದ ಭಾಗ) ಕಾಮಗಾರಿಯಲ್ಲಿ ಶೇ. 90ರಷ್ಟನ್ನು ಮೇ 15ರ ಒಳಗಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಬಿಟ್ಟುಕೊಡಲಾಗುವುದು ಎಂದು ಕಂಪನಿ ಅಧಿಕಾರಿಗಳು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.


ಈ ಪ್ರದೇಶದ ಹೆದ್ದಾರಿಯಲ್ಲಿ ಒಟ್ಟು 7 ಫ್ಲೈ ಓವರ್ ಗಳು ಹಾಗೂ 7 ಅಂಡರ್ ಪಾಸ್‌ ರಸ್ತೆಗಳು ಬರುತ್ತಿದ್ದು, ಕಾಮಗಾರಿಗಳು ವೇಗ ಪಡೆದುಕೊಂಡಿವೆ. ಕೆಲವೆಡೆ ಮಳೆಗಾಲದಲ್ಲಿ ಹೆದ್ದಾರಿ ಪಕ್ಕದ ಜಮೀನುಗಳಿಗೆ, ಮನೆಗಳಿಗೆ ನೀರು ನುಗ್ಗಿ ತೊಂದರೆಯಾಗುವ ಸನ್ನಿವೇಶವಿದ್ದು, ಅವುಗಳನ್ನು ಬೇಗನೆ ಸರಿಪಡಿಸುವಂತೆ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.



ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಅ ಅವರು ಗುರುವಾರ ಎನ್.ಹೆಚ್- 75 ವ್ಯಾಪ್ತಿಯ ಬಿ.ಸಿ ರೋಡ್ ಜಂಕ್ಷನ್, ಕುದ್ರೆಬೆಟ್ಟು, ಕಲ್ಲಡ್ಕ, ಮಾಣಿ, ಕೆದಿಲ, ಪೆರ್ನೆ, ನೆಕ್ಕಿಲಾಡಿ, ಉಪ್ಪಿನಂಗಡಿ ಮತ್ತು ನೀರಕಟ್ಟೆ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಹಾಗೂ ಗುತ್ತಿಗೆದಾರರೊಂದಿಗೆ ಭೇಟಿ ನೀಡಿ ಹೆದ್ದಾರಿ ಕಾಮಗಾರಿಯ ಪರಿಶೀಲನೆ ನಡೆಸಿದರು.


ಈ ಸಂದರ್ಭದಲ್ಲಿ ಆಯಾಯ ಪ್ರದೇಶಕ್ಕೆ ಸಂಬಂಧಪಟ್ಟಂತೆ ಸಂಸದರಿಗೆ ಈ ಹಿಂದೆ ಬಂದಿದ್ದ ಅಹವಾಲುಗಳ ವಾಸ್ತವತೆಯನ್ನು ತಿಳಿದು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಮುಖಂಡರು ಮತ್ತು ಸ್ಥಳೀಯರು ಜತೆಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top