ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 27ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಸುವ ಕುರಿತು ಸಮಾಲೋಚನಾ ಸಭೆಯು ನಗರದ ಎಸ್.ಡಿ.ಎಂ ಕಾನೂನು ಮಹಾವಿದ್ಯಾಲಯದಲ್ಲಿ ನಡೆಯಿತು.
ರವೀಂದ್ರ ರೈ ಕಲ್ಲಿಮಾರು, ಅಚ್ಚುತ ಗಟ್ಟಿ, ಸುರೇಂದ್ರ ರೈ, ಭಾಸ್ಕರ ರೈ ಕುಕ್ಕುವಳ್ಳಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಕಲ್ಲಚ್ಚು ಪ್ರಕಾಶನದ ಮಹೇಶ ಆರ್ ನಾಯಕ್ ,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಉಳ್ಳಾಲ ತಾಲ್ಲೂಕು ಹೋಬಳಿ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ರೈ ಕಲ್ಲಿಮಾರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವಿನಯ ಆಚಾರ್ಯ ಎಚ್ ಅವರು ಸ್ವಾಗತಿಸಿದರು. ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಕೆ. ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ