ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ; ಕೃತಿ ಬಿಡುಗಡೆ

Upayuktha
0




ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡದ ಬಹುರೂಪಿ ಚಿಂತನೆಗಳನ್ನು ಒಂದೆಡೆ ಕಟ್ಟಿಕೊಡುವ ಕೃತಿಯೇ 'ಅವಿಭಜಿತ ದಕ್ಷಿಣ ಕನ್ನಡದ ಮಹಿಳಾ ಚಿಂತನೆ' ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊಫೆಸರ್ ಸಬಿಹಾ ಭೂಮಿಗೌಡ ಹೇಳಿದರು.


ಬಹು ಓದು ಬಳಗ ಹಾಗೂ ಆಕೃತಿ ಆಶಯ ಪಬ್ಲಿಕೇಶನ್‌ನ ಸಹಯೋಗದೊಂದಿಗೆ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಭಾನುವಾರ ಕೃತಿ  ಬಿಡುಗಡೆಗೊಳಿಸಿ ಅವರು ಮಾತನಾಡಿದರು.


1995 ರಿಂದ 2023ರವರೆಗಿನ ಮೂರು ದಶಕಗಳ ಕಾಲದ ಈ ಭಾಗದ ಲೇಖಕ ಲೇಖಕಿಯರು  ಸಾಹಿತಿ, ಸಾಹಿತ್ಯ, ಸಂಸ್ಕೃತಿ ಮತ್ತು ಸ್ತ್ರೀವಾದಿ ತಾತ್ವಿಕತೆಯ ಬಗ್ಗೆ ಏನನ್ನು ಯೋಚನೆ ಮಾಡಿದ್ದಾರೆ, ಕಾಲ ಕಾಲಕ್ಕೆ ಅನುಗುಣವಾಗಿ ಅದನ್ನು ಹೇಗೆ ಅಭಿವ್ಯಕ್ತಿಗೊಳಿಸಿದ್ದಾರೆ  ಎಂಬುದು ಈ ಪುಸ್ತಕದ ಓದಿನಿಂದ ತಿಳಿದುಕೊಳ್ಳಬಹುದು ಎಂದು ಅವರು ಹೇಳಿದರು. 


ಕೃತಿ ವಿಮರ್ಶೆ ಮಾಡಿದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ರಾಜಲಕ್ಷ್ಮಿ ಎನ್‌ಕೆ ಮಾತನಾಡಿ, ಈ ಕೃತಿಯನ್ನು ಮಾತು-ಮಂಥನ -ಚಿಂತನ ಈ ಮೂರು ಕ್ರಮದಲ್ಲಿ ವಿಮರ್ಶೆಗೆ ಒಳಪಡಿಸಬಹುದು. ಓದಿಸಿಕೊಂಡು ಹೋಗುವ ಲೇಖನಗಳು ಮಾತು, ಮನನ ಮಾಡಿಕೊಳ್ಳುವ ಲೇಖನಗಳು ಮಂಥನ ಹಾಗೂ ಚಿಂತನೆಗೆ ಹಚ್ಚುವ ಲೇಖನಗಳು ಚಿಂತನ ಎಂದು ವಿವರಿಸಿಕೊಳ್ಳಬಹುದು ಎಂದರು.

 

ಮುಖ್ಯ ಅತಿಥಿಯಾಗಿದ್ದ ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಕೃಷ್ಣಮೂರ್ತಿ ಪಿ ಬಹು ಓದು ಬಳಗ ಹಾಗೂ ಆಕೃತಿ ಆಶಯ ಪ್ರಕಾಶನದ ಕಾರ್ಯವನ್ನು ಶ್ಲಾಘಿಸಿದರು.


ಮಂಗಳೂರು ವಿಶ್ವವಿದ್ಯಾನಿಲಯದ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊಫೆಸರ್ ಸೋಮಣ್ಣ ಹೊಂಗಳ್ಳಿ ಅಧ್ಯಕ್ಷತೆ ವಹಿಸಿದ್ದರು.


ಸಂಪಾದಕರಾದ ಡಾ. ಸತೀಶ್ ಚಿತ್ರಾಪು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಕೃತಿ ಆಶಯ ಪ್ರಕಾಶನದ ಕಲ್ಲೂರು ನಾಗೇಶ್ ಸ್ವಾಗತಿಸಿದರು. ಇನ್ನೋರ್ವ ಸಂಪಾದಕ ಸೋಮಶೇಖರ್, ಹಾಸನಡ್ಕ ವಂದಿಸಿದರು. ಡಾ. ಆಶಾಲತಾ ಚೇವಾರು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top