ಜ.22ರಂದು, ಕೃಷ್ಣ.ಜೆ.ಪಾಲೆಮಾರ್ - ಪ್ರೆಸ್ ಕ್ಲಬ್ ಗೌರವ ಅತಿಥಿ

Upayuktha
0


ಮಂಗಳೂರು:  ಪ್ರೆಸ್ ಕ್ಲಬ್ ವತಿಯಿಂದ ಜ.22ರಂದು ಬೆಳಗ್ಗೆ 11.30 ಕ್ಕೆ  ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಚೇರ್ಮನ್ ಮತ್ತು  ಸಿಇಒ ಕೃಷ್ಣ.ಜೆ.ಪಾಲೆಮಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. 


ಸಾಹಿತಿ, ಕಲಾವಿದ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್  ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

Post a Comment

0 Comments
Post a Comment (0)
Advt Slider:
To Top