ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಹಾಗೂ ರೋಟರಿ ಕ್ಲಬ್ ಪುತ್ತೂರು ಸಹಯೋಗ
ಅಡ್ಯನಡ್ಕ: ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜನತಾ ಹಿರಿಯ ಪ್ರಾಥಮಿಕ ಶಾಲಾ ಆವರಣ, ಅಡ್ಯನಡ್ಕ ಇಲ್ಲಿ ಫೆಬ್ರವರಿ 9ರಂದು ನಡೆಯಲಿದೆ.
ಬೆಳಿಗ್ಗೆ 9.30 ರಿಂದ 12.30 ವರೆಗೆ ನಡೆಯುವ ಆರೋಗ್ಯ ತಪಾಸಣಾ ಶಿಬಿರವನ್ನು ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಅಡ್ಯನಡ್ಕ ಇದರ ಅಧ್ಯಕ್ಷರಾದ ಗೋವಿಂದ ಪ್ರಕಾಶ ಸಾಯ ಉದ್ಘಾಟಿಸಲಿದ್ದಾರೆ. ರೋಟರಿ ಕ್ಲಬ್, ಪುತ್ತೂರು ಇದರ ಅಧ್ಯಕ್ಷರಾದ ರೋ.ಡಾ. ಶ್ರೀಪತಿ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೇನಪೋಯಾ ಮೆಡಿಕಲ್ ಕಾಲೇಜಿನ ವೈದ್ಯರಾದ ಡಾ. ರಾಜೇಶ್ ಕೃಷ್ಣ ಹಾಗೂ ಡಾ. ರೋಹನ್ ಶೆಟ್ಟಿ ಭಾಗವಹಿಸಲಿದ್ದಾರೆ. ದೀರ್ಘ ಕಾಲದಿಂದ ಅಡ್ಯನಡ್ಕ ಪರಿಸರದಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಹಿರಿಯ ವೈದ್ಯರಾದ ಡಾ.ಕೆ. ಸುಬ್ರಹ್ಮಣ್ಯ ಭಟ್, ಡಾ. ಶ್ರೀಕೃಷ್ಣ ಪೈಸಾರಿ ಹಾಗೂ ಡಾ. ವಿಶ್ವೇಶ್ವರ ಭಟ್ ಅವರನ್ನು ಜನತಾ ವಿದ್ಯಾಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಗುವುದು.
ಶಿಬಿರದಲ್ಲಿ ಈ ಕೆಳಗಿನ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉಚಿತವಾಗಿ ನೀಡಲಾಗುವುದು. ರಕ್ತ ವರ್ಗೀಕರಣ ಮತ್ತು ರಕ್ತದಾನ ಶಿಬಿರ, ಕಣ್ಣಿನ ಪರೀಕ್ಷೆ ಮತ್ತು ಚಿಕಿತ್ಸೆ ಇದರಲ್ಲಿ ಕಣ್ಣಿನ ಕ್ಯಾಟ್ರಾಕ್ಟ್ ಶಸ್ತ್ರಚಿಕಿತ್ಸೆಯನ್ನು ಪುತ್ತೂರಿನ ರೋಟರಿ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲಾಗುವುದು. ಕಿಡ್ನಿ, ಸಂಬಂಧಪಟ್ಟ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಮಾಹಿತಿಯನ್ನು ನೀಡಲಾಗುವುದು. ಕಿಡ್ನಿ ಡಯಾಲಿಸಿಸ್ ಸಂಬಂಧಪಟ್ಟಂತೆ ಸಲಹೆ ಮತ್ತು ಮಾರ್ಗದರ್ಶನ ನೀಡಲಾಗುವುದು. ಬಾಯಿಯ ತಪಾಸಣೆ ಮತ್ತು ದಂತ ಚಿಕಿತ್ಸೆಯನ್ನು ಉಚಿತವಾಗಿ ಮಾಡಲಾಗುವುದು. ವೈದ್ಯಕೀಯ ತಪಾಸಣೆ- ಬಿಪಿ, ಸಕ್ಕರೆ ಖಾಯಿಲೆ, ಇಸಿಜಿ ಇತ್ಯಾದಿಗಳನ್ನು ಉಚಿತವಾಗಿ ಮಾಡಲಾಗುವುದು. ಶ್ವಾಸಕೋಶ ತಪಾಸಣೆ ಮತ್ತು ಮಾಹಿತಿ, ಹೋಮಿಯೋಪತಿ ಮತ್ತು ಆಯುರ್ವೇದಿಕ್ ಚಿಕಿತ್ಸೆ, ಸ್ತನ ಕ್ಯಾನ್ಸರ್ ಮತ್ತು ಮೂತ್ರಜನಕಾಂಗದ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಇರುತ್ತದೆ. ಈ ಶಿಬಿರದಲ್ಲಿ ಆಯುಷ್ಮಾನ್ ಕಾರ್ಡ್ ನೋಂದಾವಣೆ ಮಾಡಲಾಗುವುದು.
ನೊಂದಾವಣೆಗೆ ಬೇಕಾದ ದಾಖಲೆಗಳಾದ ರೇಶನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ದಯವಿಟ್ಟು ತರಬೇಕು. ಸಾರ್ವಜನಿಕರು ಈ ಸಂದರ್ಭವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ರೋಟರಿ ಕ್ಲಬ್ ಪುತ್ತೂರು ಘಟಕದ ಅಧ್ಯಕ್ಷ ರೋ.ಡಾ. ಶ್ರೀಪತಿ ರಾವ್, ಕಾರ್ಯದರ್ಶಿ ರೋ. ದಾಮೋದರ್, ಸಮುದಾಯ ಸೇವಾ ನಿರ್ದೇಶಕ ರೋ. ರಾಜ್ ಗೋಪಾಲ್, ಕಾರ್ಯಕ್ರಮ ಸಂಯೋಜಕ ರೋ. ಉಮಾನಾಥ್ ಪಿ.ಬಿ. ಹಾಗೂ ಸರ್ವ ಸದಸ್ಯರು, ರೋಟರಿ ಕ್ಲಬ್, ಪುತ್ತೂರು ಹಾಗೂ ಅಡ್ಯನಡ್ಕ ಎಜುಕೇಶನಲ್ ಸೊಸೈಟಿ ಅಧ್ಯಕ್ಷ ರೋ. ಗೋವಿಂದ ಪ್ರಕಾಶ್ ಸಾಯ, ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಮತ್ತು ಆಡಳಿತ ಮಂಡಳಿ ಸರ್ವಸದಸ್ಯರು ಮತ್ತು ಮುಖ್ಯಸ್ಥರು, ಉಪನ್ಯಾಸಕ ವೃಂದ, ಬೋಧಕ ವೃಂದ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದ, ಅಡ್ಯನಡ್ಕ ಎಜುಕೇಶನಲ್ ಸೊಸೈಟಿ (ರಿ) ಅಡ್ಯನಡ್ಕ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ ದೂರವಾಣಿಗಳು
ಟಿ.ಆರ್. ನಾಯ್ಕ: 94499 11929 (ಮುಖ್ಯೋಪಾಧ್ಯಾಯರು, ಜನತಾ ಪ್ರೌಢಶಾಲೆ)
ಹರಿಣಾಕ್ಷಿ: 94837 47362 (ಮುಖ್ಯೋಪಾಧ್ಯಾಯಿನಿ, ಜನತಾ ಹಿರಿಯ ಪ್ರಾಥಮಿಕ ಶಾಲೆ)
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ