ಆಳ್ವಾಸ್‌ನಲ್ಲಿ ವಿಜಿಎಸ್‌ಟಿ ಪ್ರಾಯೋಜಕತ್ವದ ಎಫ್‌ಡಿಪಿ ಕಾರ್ಯಾಗಾರ

Upayuktha
0

 ಅರೆವಾಹಕ ಚಿಪ್‌ಗಳ ತಯಾರಿಕೆಯಲ್ಲಿ ಭಾರತದ ಮಹತ್ವದ ಹೆಜ್ಜೆ: ಡಾ. ರವಿ ಎಂ. ಆರ್.


ಮೂಡಬಿದಿರೆ: ಅರೆವಾಹಕ ಚಿಪ್‌ಗಳು (ಸೆಮಿಕಂಡಕ್ಟರ್ ಚಿಪ್) ಅತ್ಯಂತ ಅಗತ್ಯವಾಗಿದ್ದು ಅದನ್ನು ವಿದೇಶದಿಂದ ಆಮದು ಮಾಡಿಕೊಳ್ಳುವುದು ಇಲ್ಲಿ ತಯಾರಿಸುವುದಕ್ಕಿಂತ ಅಧಿಕವಾಗುತ್ತದೆ.  ಪ್ರಸ್ತುತ ಭಾರತ ಸರಕಾರ ಅರೆವಾಹಕ ಚಿಪ್‌ಗಳನ್ನು ತಯಾರಿಸಲು 76,000 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದ್ದು ಇದು ಮುಂಬರುವ ದಿನಗಳಲ್ಲಿ ಭಾರತ ತಂತ್ರಜ್ಞಾನದ ಮಹತ್ವದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಬೆಂಗಳೂರಿನ ಡಿಆರ್‌ಡಿಒ ಹಾಗೂ ಸಿತಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಎಂ. ಆರ್. ಹೇಳಿದರು.


ಕರ್ನಾಟಕ ಸರಕಾರದ ವಿಜನ್ ಗ್ರೂಪ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿಯ ಅನುದಾನದೊಂದಿಗೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಆಯೋಜಿಸಿದ “ಮೆಮ್ಸ್ ಕ್ಯಾರಕ್ಟರೈಸೇಶನ್ ಟೆಕ್ನಿಕ್” ಎಂಬ  ನಾಲ್ಕು ದಿನಗಳ  ಉಪನ್ಯಾಸಕರ ಕೌಶಲ್ಯಾಭಿವೃದ್ಧಿ (ಎಫ್‌ಡಿಪಿ) ಕಾರ್ಯಾಗಾರವನ್ನು ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.  


ಭಾರತದಲ್ಲಿ ಜ್ಞಾನದ ಸಂಪತ್ತು ಹೇರಳವಾಗಿದ್ದು, ಮೇಮ್ಸ್ ಹಾಗೂ ಸೆಮಿಕಂಡಕ್ಟರ್‌ಗೆ ಸಂಬಂಧಿಸಿದ 150ಕ್ಕೂ ಅಧಿಕ ಸಂಸ್ಥೆಗಳು  ಬೆಂಗಳೂರಿನಲ್ಲಿವೆ.  ನಾವು ಅನೇಕ ತಂತ್ರಜ್ಞಾನವನ್ನು ಕಂಡುಕೊಂಡಿ ದ್ದೇವೆ. ಭಾರತದಲ್ಲಿ ಉಡಾವಣೆಗೊಳ್ಳುವ ಕ್ಷಿಪಣಿಗಳು ಶೇ 99 ರಷ್ಟು ಭಾರತದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದರು.  


ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ಡಿಆರ್‌ಡಿಒ ವಿಜ್ಞಾನಿ ಡಾ. ಗೋಪಾಲಕೃಷ್ಣ ಅವರು ಮಾತನಾಡಿ ಇಂತಹ ಕಾರ್ಯಾಗಾರಗಳು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿರುವ ಅವಕಾಶಗಳ ಸಾಧ್ಯತೆಗಳನ್ನು ತಿಳಿದುಕೊಳ್ಳಲು ಪೂರಕವಾಗಿದೆ. ಆಳ್ವಾಸ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯದ ನಿರ್ಮಾಣಕ್ಕಾಗಿ  ಶ್ರಮಿಸುತ್ತಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಶಿಕ್ಷಣ ಸಂಸ್ಥೆಗಳ ಪೈಪೋಟಿಗಳ ನಡುವೆಯೂ ಉತ್ತಮ ಸಹಯೋಗ ಅಗತ್ಯವಿದೆ. ಇಂತಹ ಸಹಯೋಗದ ಶಿಕ್ಷಣದಿಂದ  ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಪೂರಕವಾಗಿವೆ. ಜೊತೆಗೆ ಉಪನ್ಯಾಸಕರ ನಡುವೆ ಉತ್ತಮ ಬಾಂಧವ್ಯವಿದ್ದಾಗ ಶೈಕ್ಷಣಿಕ ಬೆಳವಣಿಗೆ ಸಾಧ್ಯ ಎಂದರು.


ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫೆರ್ನಾಂಡಿಸ್, ಡೀನ್ ಡಾ. ರಿರ್ಚಡ್ ಪಿಂಟೊ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥ ಡಾ. ದತ್ತಾತ್ರೇಯ ಅತಿಥಿಗಳನ್ನು ಪರಿಚಯಿಸಿದರು. ಹಿರಿಯ ಸಹಾಯಕ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಗಣೇಶ್ ಎನ್.ವಿ. ಸ್ವಾಗತಿದರು. ಡಾ. ಡಿ. ವಿ. ಮಂಜುನಾಥ ವಂದಿಸಿದರು. ಉಪನ್ಯಾಸಕಿ ಲಿಪಿ ಮ್ಯಾಥ್ಯೂ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top