ದ.ಕ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಕಲೋತ್ಸವ’

Upayuktha
0

ಸ್ಕೌಟ್ಸ್ ಆ್ಯಂಡ್ ಗೈಡ್ಸ್  ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ನಡೆದ ಕಾರ್ಯಕ್ರಮ.




ಮೂಡುಬಿದಿರೆ: ಕಾಲ ಕಾಲಕ್ಕೆ  ಸರಿಯಾದ ವಿದ್ಯೆ ಬುದ್ಧಿಯ ಜೊತೆಗೆ ಹೃದಯಕ್ಕೆ ಸಂಸ್ಕಾರವನ್ನು ಒದಗಿಸುವ ಕೆಲಸ ಈ ಪ್ರತಿಭಾ ಕಲೋತ್ಸವದ  ಮೂಲಕ ಸಹಕಾರಗೊಳ್ಳಲಿದೆ ಎಂದು ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಆಯಕ್ತ ಹಾಗೂ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ನುಡಿದರು.


ಭಾರತ್ ಸ್ಕೌಟ್ಸ್ ಗೈಡ್ಸ್, ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾ ಮಟ್ಟದ  ‘ಪ್ರತಿಭಾ ಕಲೋತ್ಸವ’ವನ್ನು ಉದ್ಘಾಟಿಸಿ ಮಾತನಾಡಿದರು. 

 

ದೇಶದಲ್ಲೆ ಮೊಟ್ಟ ಮೊದಲ ಬಾರಿಗೆ ಭಾರತ್ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗಾಗಿ  ಜಿಲ್ಲಾ ಮಟ್ಟದ  ಪ್ರತಿಭಾ ಕಲೋತ್ಸವ ಹಮ್ಮಿಕೊಂಡಿರುವುದು ಖುಷಿ ನೀಡಿದೆ.  ಪಠ್ಯೇತರವಾಗಿ ಮನಸ್ಸನ್ನು ಕಟ್ಟುವ ಇಂತಹ  ಕಾರ್ಯಕ್ರಮಗಳು ಎಲ್ಲಾ ಭಾಗಗಳಲ್ಲೂ ನಡೆಯಬೇಕು. 


ಆ ಮೂಲಕ ವಿದ್ಯಾರ್ಥಿಗಳಲ್ಲಿ ಭಾರತ್ ಸ್ಕೌಟ್ಸ್ ಗೈಡ್ಸ್ ಕುರಿತು ಇನ್ನಷ್ಟು ಜಾಗೃತಿ ಮೂಡಿ, ಸ್ಕೌಟ್ಸ್ ಗೈಡ್ಸ್ ಆಂದೋಲನ ದೇಶದಾದ್ಯಂತ ಮುಂಚೂಣಿಯಲ್ಲಿ ನಿಲ್ಲಬೇಕು. ಆ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸಬೇಕು ಎಂದರು. 


ಈ ಕಾರ್ಯಕ್ರಮದಲ್ಲಿ  ಜಿಲ್ಲೆಯ 19 ಸ್ಥಳೀಯ ಸಂಸ್ಥೆಗಳಿಂದ 1400 ಪ್ರತಿನಿಧಿಗಳು ಆಗಮಿಸಿರುವುದು ನಾವು ಹಮ್ಮಿಕೊಂಡ  ಕಾರ್ಯಕ್ರಮ ಸಫಲತೆಯನ್ನು ಕಾಣುವಂತೆ ಮಾಡಿದೆ. ಭಾರತ್ ಸ್ಕೌಟ್ಸ್ ಗೈಡ್ಸ್ ಪ್ರತಿ ವಿದ್ಯಾರ್ಥಿಯನ್ನು ಈ ದೇಶದ ಸಂಪತ್ತಾಗಿ ಪರಿವರ್ತಿಸುವ ನೆಲೆಯಲ್ಲಿ ನಾವು ಕೆಲಸ ಕೈಗೊಳ್ಳಬೇಕು ಎಂದರು.


ಕಬ್ಸ್-ಬುಲ್‌ಬುಲ್ಸ್, ರೋವರ್-ರೇಂರ‍್ಸ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ಸಮೂಹ ಹಾಗೂ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ದೇಶಭಕ್ತಿ ಗೀತೆ, ಜಾನಪದ ಗೀತೆ, ಜಾನಪದ ನೃತ್ಯ, ಕಿರುಪ್ರಹಸನ, ಅಭಿನಯ ಗೀತೆ, ಕಥೆ ಹೇಳುವುದು,  ಚಿತ್ರಕಲೆ, ಶಾಸ್ತ್ರೀಯ ಸಂಗೀತ, ಆಶುಭಾಷಣ,  ಪ್ರಬಂಧ, ಭಾವಗೀತೆ, ರಂಗೋಲಿ, ಮಿಮಿಕ್ರಿ,  ಶಾಸ್ತ್ರೀಯ ನೃತ್ಯ  ಹಾಗೂ ಕ್ಲೇ ಮಾಡಲಿಂಗ್ ಸ್ಪರ್ಧೆಗಳು ನಡೆದವು.


ಕಾರ್ಯಕ್ರಮದಲ್ಲಿ ಜಿಲ್ಲಾ ಗೈಡ್ಸ್ ಆಯುಕ್ತೆ ವಿಮಲಾ ರಂಗಯ್ಯ,ಕಾರ‍್ಯದರ್ಶಿ ಪ್ರತಿಮ್ ಕುಮಾರ್, ಜೊತೆ  ಕಾರ‍್ಯದರ್ಶಿ ಜಯವಂತಿ ಸೋನ್ಸ್, ಜಿಲ್ಲಾ ಕೋಶಾಧಿಕಾರಿ ನವೀನಚಂದ್ರ ಅಂಬೂರಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ, ಮೂಡುಬಿದಿರೆ  ಸ್ಥಳೀಯ ಸಂಸ್ಥೆಕಾರ‍್ಯದರ್ಶಿ ಭಾರತಿ ನಾಯಕ್ ಇದ್ದರು.


ಬಹುಮಾನಗಳು

ಕಬ್ಸ್-ಬುಲ್‌ಬುಲ್ಸ್  ವಿಭಾಗದಲ್ಲಿ ಆಳ್ವಾಸ್  ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಪ್ರಥಮ, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ, ದ್ವಿತೀಯ, ಬೆಥನಿ  ಆಂಗ್ಲ ಮಾಧ್ಯಮ ಶಾಲೆ ತೃತೀಯ ಸ್ಥಾನ ಪಡೆದರೆ, 


ಸ್ಕೌಟ್ಸ್ ಗೈಡ್ಸ್ನಲ್ಲಿ ಆಳ್ವಾಸ್ ಕನ್ನಡ  ಮಾಧ್ಯಮ ಶಾಲೆ ಪ್ರಥಮ, ಆಳ್ವಾಸ್  ಆಂಗ್ಲ ಮಾಧ್ಯಮ ಶಾಲೆ ಹಾಗೂ ಆಳ್ವಾಸ್ ಸೆಂಟ್ರಲ್  ಶಾಲೆ ದ್ವಿತೀಯ ಸ್ಥಾನ ಹಂಚಿಕೊಂಡವು. ರೋವರ್-ರೇಂರ‍್ಸ್ ವಿಭಾಗದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಪ್ರಥಮ, ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top