ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ತುಳು ಚಿತ್ರಕ್ಕೆ ಮುಹೂರ್ತ

Upayuktha
0


ಮಂಗಳೂರು: ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಆರಂಭದಲ್ಲಿ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯತ್ ನ ಮಾಜಿ ಸದಸ್ಯರಾದ ವಲ್ಸರಾಜ್, ಪಿಎನ್ ಆರ್ ಪ್ರೊಡಕ್ಷನ್‌ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.


ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು  ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮ ನಿರೂಪಿಸಿದರು. ಚಿತ್ರದಲ್ಲಿ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top