ಜ.25:ರಾಷ್ಟ್ರೀಯ ಮತದಾರರ ದಿನಾಚರಣೆ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.


ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್ ಎಸ್. ಗಂಗಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್, ಅಪರ ಜಿಲ್ಲಾಧಿಕಾರಿ (ಪ್ರಭಾರ) ನಾಗರಾಜ ವಿ ನಾಯಕ್, ಉಡುಪಿ ತಾಲೂಕು ತಹಶೀಲ್ದಾರ್ ಪಿ.ಆರ್ ಗುರುರಾಜ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top