ಉಡುಪಿ: ಇತ್ತೀಚೆಗೆ ಹರಿಯಾಣದ ರೇೂಹ್ಟಕ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯ ಕರಾಟೆ ಸ್ಪರ್ಧಾಕೂಟದ 68 ಕೆ.ಜಿ. ವಿಭಾಗದಲ್ಲಿ ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನ ಬಿಸಿಎ ಎರಡನೇ ವರುಷದ ವಿದ್ಯಾರ್ಥಿನಿ ಛಾಯಾ ಎಸ್. ಪೂಜಾರಿ ಅವರು ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ ಏಕೈಕ ವಿದ್ಯಾರ್ಥಿನಿ.
ಇವರ ಈ ಕ್ರೀಡಾ ವಿಶೇಷ ಸಾಧನೆಗೆ ಸಂಧ್ಯಾ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಿಬ್ಬಂದಿ ವಗ೯ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ