ದೇಶದ ಬೆಳವಣಿಗೆ ಪ್ರಥಮ ಆದ್ಯತೆಯಾಗಬೇಕು: ಪ್ರದೀಪ್ ಮೋಹನ್ ಗೋಡ್ಬೋಲೆ

Upayuktha
0

ನಿಟ್ಟೆ: 'ದೇಶದ ಅಭಿವೃದ್ಧಿಯಲ್ಲಿ ನಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಚಿಂತಿಸಬೇಕು' ಎಂದು ಕ್ರಿಕೆಟರ್ ಪ್ರದೀಪ್ ಮೋಹನ್ ಗೋಡ್ಬೋಲೆ ಅಭಿಪ್ರಾಯಪಟ್ಟರು.


ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳು ಜಂಟಿಯಾಗಿ  ನಿಟ್ಟೆಯ ಬಿಸಿ ಆಳ್ವ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. 'ದೇಶದ ಪ್ರಜ್ಞಾವಂತ ಪ್ರತಿಯೋರ್ವ ಪ್ರಜೆಯೂ ತಲೆಯೆತ್ತಿ ಗೌರವಿಸುವಂತಹ ಶ್ರೇಷ್ಠತೆ ರಾಷ್ಟ್ರ ಧ್ವಜಕ್ಕೆ ಇದೆ. ಸಂಪತ್ತಿನ ಹಿಂದೆ ಹೋಗದೆ ನಿರ್ದಿಷ್ಟವಾಗಿ ಹಾಗೂ ನಿಯಮಿತ ಬದುಕನ್ನು ನಾವು ಅನುಸರಿಸಬೇಕು' ಎಂದರು.


ಕಾರ್ಯಕ್ರಮದಲ್ಲಿ ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ಶಿಕ್ಷಕವೃಂದ, ಶಿಕ್ಷಕೇತರ ವರ್ಗದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಿಟ್ಟೆ ಎನ್.ಎಸ್.ಎ.ಎಂ ಶಾಲೆಯ ಆರ್ಮಿ ಎನ್.ಸಿ.ಸಿ ಘಟಕ, ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ನೇವಲ್ ಘಟಕ ಹಾಗೂ ಕಾಲೇಜು ಕ್ಯಾಂಪಸ್ ನ ಭಗ್ರತಾ ಸಿಬ್ಬಂದಿಗಳ ವತಿಯಿಂದ ಆಕರ್ಷಕ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು.


ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು. ರಸಾಯನಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಡಾ.ಸರ್ವಜಿತ್ ವಂದಿಸಿದರು. ನಿಟ್ಟೆ ತಾಂತ್ರಿಕ ಕಾಲೇಜಿನ ಎನ್.ಸಿ.ಸಿ ನೇವಲ್ ಘಟಕದ ಸಂಯೋಜಕ ಡಾ.ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top