ನಮ್ಮೊಳಗಿನ ಅಸ್ಥಿರತೆಯ ಭ್ರಮೆಯನ್ನು ಹೋಗಲಾಡಿಸಿಕೊಳ್ಳಬೇಕು: ಕ್ಯಾ. ಅನೂಪ್ ಸೂದ್

Upayuktha
0



ಬೆಂಗಳೂರು: ‘ನಮ್ಮೊಳಗಿನ ಅಸ್ಥಿರತೆಯ ಭ್ರಮೆಯನ್ನು ನಾವೇ ಹೋಗಲಾಡಿಸಿಕೊಳ್ಳಬೇಕು. ಆಗ ನಮ್ಮನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಇದೇ ಯಶಸ್ಸಿನ ಹಾಗೂ ಪ್ರಗತಿಯ ರಹಸ್ಯ. ನಮ್ಮ ದೇಶ ಅದ್ಭುತ ಸಾಧನೆ ಮಾಡಲು ಇದು ಬಹಳ ಮುಖ್ಯ’, ಎಂದು ಭಾರತೀಯ ವಾಯುಸೇನೆಯ ನಿವೃತ್ತ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಅನೂಪ್ ಸೂದ್ ನುಡಿದರು. 


ಅವರು ಬೆಂಗಳೂರಿನ ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜರುಗಿದ ಗಣರಾಜ್ಯೊತವ ಸಮಾರಂಭದಲ್ಲಿ, ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ಎನ್.ಸಿ.ಸಿ ಕೆಡೆಟ್‌ಗಳ ಪಥಸಂಚಲನ ಮತ್ತು ದೇಶಭಕ್ತಿಯ ಸಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಮನ ಸೆಳೆದವು.


ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್ ಪೂಂಜ, ಸಂಸ್ಥೆಯ ಎನ್.ಸಿ.ಸಿ ಮುಖ್ಯಸ್ಥ ಪ್ರೊ. ರಾಜೇಶ್ ನಂದಳಿಕೆ ಮತ್ತಿತರರು ಉಪಸ್ಥಿತರಿದ್ದರು. ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಹೆಚ್.ಸಿ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top